ಬೆಂಗಳೂರು:
ನಟ ದರ್ಶನ್ ಗ್ಯಾಂಗ್ ನ ಕ್ರೌರ್ಯ ದಿನೇದಿನೇ ಬಗೆದಷ್ಟು ಬೆಳಕಿಗೆ ಬರುತ್ತಿದ್ದು, ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸರ್ಕಾರ ನೇಮಿಸಿರುವ ಎಸ್‌ಪಿಪಿ ಪ್ರಸನ್ನಕುಮಾರ್ ಅವರು ಖಡಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಎಸ್‌ಪಿಪಿ ಪ್ರಸನ್ನಕುಮಾರ್ ಅವರನ್ನು ಬದಲಾಯಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆಯಂತೆ.
ಪ್ರಸನ್ನ ಕುಮಾರ್ ಬದಲಾವಣೆಗೆ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರಂತೆ. ಹೀಗಾಗಿ, ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚಿಂತನೆ ನಡೆಯುತ್ತಿದೆ ಎನ್ನಲಾಗಿದೆ.
ಎಸ್‌ಪಿಪಿ ಪ್ರಸನ್ನಕುಮಾರ್ ಅವರನ್ನು ಬದಲಿಸಿದರೆ ಅನುಮಾನ ಬರುವ ಸಾಧ್ಯತೆ ಇರುವುದರಿಂದ, ರಾಜ್ಯ ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎನ್ನಲಾಗುತ್ತಿದೆ. ಈ ಹಿಂದೆ ಆರೋಪಿ ದರ್ಶನನ್ನು ಬಂಧಿಸುವ ಮುನ್ನ ಪ್ರಭಾವಿ ಸಚಿವರು ದರ್ಶನ್‌ನನ್ನ A1 ಅಥವಾ A2 ಮಾಡಬೇಡಿ ಅಂತ ದುಂಬಾಲು ಬಿದ್ದಿದ್ದರು. ಈಗ ಸರ್ಕಾರವೇ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರನ್ನು ಬದಲಿಸುವ ಚಿಂತನೆ ನಡೆಸಿರುವುದು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ