ತುಮಕೂರು :
ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ 11.30 ಕ್ಕೆ ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಲ್ಲಿಸಲಿದ್ದಾರೆ.
ನಾನು ಸ್ವಯಿಚ್ಛೆಯಿಂದ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ತಾವುಗಳು ದಯಮಾಡಿ ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ಕರ್ನಾಟಕ ವಿಧಾಸಭೆ ಸಭಾಧ್ಯಕ್ಷರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಮತ್ತು ಹೆಚ್ ಡಿ ಕುಮಾರಸ್ವಾಮಿ ನಡುವಿನ ಸಂಬಂಧ ಅಣ್ಣತಮ್ಮಂದಿರಂತಿತ್ತು. ಸುಮಾರು ಒಂದೂವರೆ ವರ್ಷಗಳ ಹಿಂದೆ ಆ ಸಂಬಂಧಕ್ಕೆ ಯಾರೋ ಹುಳಿ ಹಿಂಡಿದರು. ಹೀಗಾಗಿ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ