ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಪದವಿ – ಸ್ನಾತಕೋತ್ತರ ಶಿಕ್ಷಣ ಕ್ಷೇತ್ರ ಅತ್ಯಗತ್ಯ

ತುಮಕೂರು:

       ಶ್ರೀ ಸೃಷ್ಟಿಯು ಯುವ ಸೃಷ್ಟಿಯಾಗಿ ಪರಿವರ್ತನೆಗೆ ಕಾರಣವಾಗ ಬೇಕೆಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಕಾಲ ಬದಲಾದಂತೆ ಆಶ್ರಯಗಳು, ಆಸಕ್ತಿಗಳು ಬದಲಾಗುತ್ತವೆ. ವಿಜ್ಞಾನ ಮತ್ತು ತಂತ್ರಜ್ಞಾನ ಬಗ್ಗೆ ಮಾತನಾಡುತ್ತಾ 20 ನೇ ಶತಮಾನದಲ್ಲಿ ಜಗತ್ತು ನಾಗಾಲೋಟದಲ್ಲಿ ಓಡುತ್ತಿದೆ ವಿಜ್ಞಾನ ಮತ್ತು ಸಾಮಾಜಿಕ ವಿಜ್ಞಾನಗಳು ಭೌತಿಕ ಜಗತ್ತನ್ನು ಅರ್ಥ ಮಾಡಿಕೊಳ್ಳುವ ಸಾಧನಗಳಾಗಿವೆ.

      ಈ ಜಾಗತೀಕರಣದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಇಚ್ಚಾಶಕ್ತಿ ಕೊರತೆ ಇದೆ. ಆತ್ಮತೃಪ್ತಿ ಇಲ್ಲದೆ ಅನ್ಯಮಾರ್ಗ ಹಿಡಿದು ತಪ್ಪುಗಳನ್ನು ಮಾಡುತ್ತಿದ್ದಾರೆ. ಪ್ರಮಾಣಿಕತೆ, ನಿರಂತರ ಕಲಿಕೆ, ಆತ್ಮವಿಮರ್ಶೆಗಳ ಮೂಲಕ ತಪ್ಪುಗಳನ್ನು ತಿದ್ದಿಕೊಂಡು ಅರಿವಿನ ದಾರಿಯಲ್ಲಿ ಸಾಗಬೇಕಾಗಿದೆ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ವೈ.ಎಸ್. ಸಿದ್ದೇಗೌಡರವರು ಅಭಿಪ್ರಾಯಪಟ್ಟರು.

      ನಗರದ ಶಿರಾ ರಸ್ತೆಯ ಶ್ರೀದೇವಿ ಪದವಿ ಕಾಲೇಜು ಮತ್ತು ಶ್ರೀದೇವಿ ಸ್ನಾತಕೋತ್ತರ ಕೇಂದ್ರದ ವತಿಯಿಂದ ಶ್ರೀ ಸೃಷ್ಟಿ-2018 ಎಂಬ ಕಾರ್ಯಕ್ರಮವನ್ನು ಸೆ.19 ರಂದು ಬೆಳಿಗ್ಗೆ 11ಗಂಟೆಗೆ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಅಡಿಟೋರಿಯಂ ಸಭಾಂಗಣದಲ್ಲಿ ಕಾಲೇಜಿನ ಸ್ವಾಗತ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು

     ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಅವರು ಆಸೆ ಆಕಾಂಕ್ಷೆಗಳಿಗೆ ಕಡಿವಾಣ ಹಾಕಬೇಕು ದೈಹಿಕ, ಮಾನಸಿಕ, ಆಧ್ಯಾತ್ಮಿಕ ಆರೋಗ್ಯವನ್ನು ಸದೃಢಪಡಿಸಿಕೊಂಡು ಅರಿಷಡ್ವರ್ಗಗಳನ್ನು ನಿಯಂತ್ರಣದಲ್ಲಿಡಬೇಕು. ಆರೋಗ್ಯಕರವಾದ ಸಮಾಜ ನಿರ್ಮಾಣಕ್ಕೆ ಪದವಿ ಹಂತದಲ್ಲಿ ವಿಜ್ಞಾನ ವಿಷಯಗಳ ಜೊತೆಗೆ ಕಲಾ- ವಾಣಿಜ್ಯ ವಿಷಯಗಳ ಜ್ಞಾನವು ವೃದ್ಧಿಸಿಕೊಳ್ಳ ಬೇಕು. ನರಕವನ್ನೇ ಸ್ವರ್ಗವಾಗಿ ಪರಿವರ್ತಿಸಿಕೊಳ್ಳುವ ಶಕ್ತಿ ವಿದ್ಯಾರ್ಥಿಗಳಲ್ಲಿದೆ. ವಿದ್ಯಾರ್ಥಿಗಳು ದೂರದೃಷ್ಟಿಯ ಕನಸುಗಳನ್ನು ನನಸಾಗಿಸಿಕೊಂಡು ತಮಗೆ ಇರುವ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಂಡರೆ ಇಡೀ ಜೀವನವೇ ಸ್ವರ್ಗ ಸದೃಢವಾಗಿರುತ್ತದೆ.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್. ಹುಲಿನಾಯ್ಕರ್‍ರವರು ಮಾತನಾಡುತ್ತಾ ವಿದ್ಯಾರ್ಥಿ ಜೀವನ ಮಹತ್ವವಾಗಿದ್ದು, ನಿಮ್ಮ ಭವಿಷ್ಯವನ್ನು ನೀವೇ ಉತ್ತಮಪಡಿಸಿಕೊಂಡು ಆತ್ಮಸ್ಥೈರ್ಯದಿಂದ ತಮ್ಮ ಮುಂದಿನ ಬದುಕನ್ನು ಹಸುನಾಗಿಸಿಕೊಳ್ಳಬೇಕು. ಸಾಮಾನ್ಯ ಜ್ಞಾನವಿಲ್ಲದ್ದ ಸಂಸ್ಕಾರವಿಲ್ಲದ ಶಿಕ್ಷಣದಿಂದ ಯಾವುದೇ ಪ್ರಯೋಜನವಿಲ್ಲ ಕೊಠಡಿಯೊಳಗಿನ ಪಾಠದ ಜೊತೆಗೆ ಜೀವನದ ಪಾಠವನ್ನು ಕಲಿಸುವ ಶಿಕ್ಷಣ ವ್ಯವಸ್ಥೆ ಇಂದು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ಈ ನಿಟ್ಟಿನಲ್ಲಿ ಶ್ರೀದೇವಿ ಸಂಸ್ಥೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವಲ್ಲಿ ಬದ್ಧವಾಗಿದೆ ಎಂದು ತಿಳಿಸಿದರು.

    ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್. ಪಾಟೀಲ್, ಶ್ರೀದೇವಿ ಚಾರಿಟಬಲ್ ಟ್ರಸ್ಟ್ ಅಂಬಿಕಾರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಹೇಮಾದ್ರಿ ನಾಯ್ಡುರವರು ಮಾತನಾಡುತ್ತಾ ವಿದ್ಯಾರ್ಥಿಗಳು ಮೊಬೈಲ್ ಬಳಕೆಯೊಂದಿಗೆ ಕಾಲಹರಣ ಮಾಡುವುದನ್ನು ಬಿಟ್ಟು ಅಧ್ಯಯನಶೀಲರಾಗಿ ಉತ್ತಮ ಫಲಿತಾಂಶವನ್ನು ಪಡೆದು ಭವಿಷ್ಯವನ್ನು ಉಜ್ವಲಗೊಳ್ಳಿಸಿಕೊಳ್ಳಬೇಕೆಂದು ಕರೆ ನೀಡಿದರು.

    ಶ್ರೀದೇವಿ ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲರಾದ ಪ್ರೊ. ಟಿ.ವಿ.ತ್ಯಾಗರಾಜುರವರು ಮಾತನಾಡುತ್ತಾ ಕಾಲೇಜಿನ ವಿವಿಧ ಚಟುವಟಿಕೆಗಳ ಹಿನ್ನೋಟ ಹಾಗೂ ಮುನ್ನೋಟದ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರೊ. ಉಪೇಂದ್ರನಾಥ್ ಮತ್ತು ಪ್ರೊ. ಜೀವಿತ್, ಪ್ರಾರ್ಥನೆಯನ್ನು ವೀರೇಂದ್ರಗೌಡ ಸಲ್ಲಿಸಿದರು, ಪ್ರೊ. ಸಿದ್ದರಾಮಣ್ಣ ಸ್ವಾಗತ ಕೋರಿದರು. ಪ್ರೊ. ಪಲ್ಲವಿ ವಂದಿಸಿದರು. ಹಾಗೂ ವಿವಿಧ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿ- ವಿದ್ಯಾರ್ಥಿನಿಯರು ಭಾಗವಹಿಸಿದರು.

                    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link