ಶ್ರೀಲಂಕಾ ಸರಣಿಯಿಂದ ಬೆನ್‌ ಸ್ಟ್ರೋಕ್ಸ್‌ ಹೊರಕ್ಕೆ….!

ಬ್ರಿಟನ್

‌    ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್  ಹೊರಬಿದ್ದಿದ್ದಾರೆ. ದಿ ಹಂಡ್ರೆಡ್ ಲೀಗ್​ ಟೂರ್ನಿಯಲ್ಲಿ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದ ಸ್ಟೋಕ್ಸ್ ಇದೀಗ ಲಂಕಾ ವಿರುದ್ಧದ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಮ್ಯಾಚೆಂಸ್ಟರ್​ನ ಒಲ್ಡ್​ ಟ್ರಾಫರ್ಡ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಒರಿಜಿನಲ್ಸ್ ವಿರುದ್ಧದ ಪಂದ್ಯದಲ್ಲಿ ನಾರ್ಥನ್ ಸೂಪರ್​​ಚಾರ್ಜರ್ಸ್ ಪರ ಬೆನ್ ಸ್ಟೋಕ್ಸ್ ಆರಂಭಿಕರಾಗಿ ಕಣಕ್ಕಿಳಿದಿದ್ದ ಸ್ಟೋಕ್ಸ್ ಬ್ಯಾಟಿಂಗ್ ವೇಳೆ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದರು. ಅಲ್ಲದೆ ಕುಸಿದು ಬಿದ್ದಿದ್ದ ಅವರು ಅರ್ಧದಲ್ಲೇ ಮೈದಾನ ತೊರೆದಿದ್ದರು.

    ಇದೀಗ ಬೆನ್ ಸ್ಟೋಕ್ಸ್ ಅವರ ವೈದ್ಯಕೀಯ ವರದಿಗಳು ಬಂದಿದ್ದು, ಈ ವರದಿಯಲ್ಲಿ ಅವರಿಗೆ ಹೆಚ್ಚಿನ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಅದರಂತೆ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಿಂದ ಇಂಗ್ಲೆಂಡ್ ತಂಡದ ನಾಯಕನ ಹೊರಗುಳಿದಿದ್ದಾರೆ. 

    ಬೆನ್ ಸ್ಟೋಕ್ಸ್​ ಹೊರಗುಳಿದಿರುವ ಕಾರಣ ಇಂಗ್ಲೆಂಡ್ ತಂಡಕ್ಕೆ ನೂತನ ನಾಯಕನಾಗಿ ಒಲೀ ಪೋಪ್ ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ ಪರ 46 ಟೆಸ್ಟ್ ಪಂದ್ಯಗಳನ್ನಾಡಿರುವ 26 ವರ್ಷದ ಪೋಪ್ ಇದೇ ಮೊದಲ ಬಾರಿಗೆ ತಂಡದ ಕ್ಯಾಪ್ಟನ್ ಆಗಿ ಆಯ್ಕೆಯಾಗಿರುವುದು ವಿಶೇಷ. ಈ ಮೂಲಕ ಚೊಚ್ಚಲ ಬಾರಿಗೆ ಆಂಗ್ಲ ಪಡೆಯನ್ನು ಯಶಸ್ವಿಯಾಗಿ ಮುನ್ನಡೆಸುವ ವಿಶ್ವಾಸದಲ್ಲಿದ್ದಾರೆ.  ಒಲೀ ಪೋಪ್ (ನಾಯಕ), ಜೋ ರೂಟ್, ಗಸ್ ಅಟ್ಕಿನ್ಸನ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಜೋರ್ಡಾನ್ ಕಾಕ್ಸ್, ಬೆನ್ ಡಕೆಟ್, ಡಾನ್ ಲಾರೆನ್ಸ್,  ಮ್ಯಾಥ್ಯೂ ಪಾಟ್ಸ್,  ಜೇಮಿ ಸ್ಮಿತ್ (ವಿಕೆಟ್ ಕೀಪರ್), ಓಲಿ ಸ್ಟೋನ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್.

Recent Articles

spot_img

Related Stories

Share via
Copy link
Powered by Social Snap