ಚಿಕಿತ್ಸೆ ಬಳಿಕ ಮನೆಗೆ ಮರಳಿದ ಶ್ಯಾಮನೂರು ಶಿವ ಶಂಕರಪ್ಪ……!

ಬೆಂಗಳೂರು:

     ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದ ದೇಶದ ಅತ್ಯಂತ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ದಾವಣಗೆರೆಯ ಕಾಂಗ್ರೆಸ್ ಶಾಸಕ 92-ವರ್ಷ ವಯಸ್ಸಿನ ಶಾಮನೂರು ಶಿವಶಂಕರಪ್ಪ ಅವರು, ಚಿಕಿತ್ಸೆ ಬಳಿಕ ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

    ಕೆಮ್ಮು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದ ಅವರನ್ನು ದಾವಣಗೆರೆಯ ಎಸ್‌ಎಸ್‌ಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನಂತರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಹೇಳಲಾಗಿದ್ದು, ಇದೀಗ ಮನೆಗೆ ವಾಪಸ್ಸಾಗಿದ್ದಾರೆಂದು ತಿಳಿದುಬಂದಿದೆ.

    ಈ ನಡುವೆ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ಕುರಿತು ವದಂತಿಗಳು ಹರಿದಾಡಲು ಆರಂಭವಾಗಿದ್ದು, ಈ ಬಗ್ಗೆ ಅಖಿಲ ಭಾರತ ವೀರಶೈವ ಮಹಾಸಭಾ ಹೇಳಿಕೆ ನೀಡಿ, ಸ್ಪಷ್ಟನೆ ನೀಡಿದೆ.

    ನಮ್ಮ ಅಧ್ಯಕ್ಷರು ಆಸ್ಪತ್ರೆಯಲ್ಲಿದ್ದಾರೆ, ಆದರೆ ಅವರ ಆರೋಗ್ಯದ ನಿಯತಾಂಕಗಳು ಉತ್ತಮವಾಗಿವೆ ಮತ್ತು ಚಿಂತಿಸಬೇಕಾಗಿಲ್ಲ ಎಂದು ಹೇಳಿದೆ. ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ವೀರಶೈವ ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ ತಿಳಿಸಿದ್ದಾರೆ.

    ಹದಿನೈದು ದಿನಗಳಲ್ಲಿ ಶಾಮನೂರು ಶಿವಶಂಕರಪ್ಪ ಅವರು 93 ನೇ ವರ್ಷಕ್ಕೆ ಕಾಲಿಡಲಿದ್ದು, ಜೂನ್ 16ರಂದು ಅವರ ಜನ್ಮದಿನಾಚರಣೆಗೆ ವೀರಶೈವ ಮಹಾಸಭಾ ಭರ್ಜರಿ ಸಿದ್ಧತೆ ನಡೆಸಿದೆ.

    ಹೃದಯ ಸಂಬಂಧಿ ಹಾಗೂ ಕಫದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಮನೂರು ಅವರು ದಿಢೀರ್​ ಆಸ್ಪತ್ರೆಗೆ ಆಗಮಿಸಿದ್ದರು. ಉಸಿರಾಟದ ತೊಂದರೆ ಇರುವುದರಿಂದ ಫೇಸ್ ಮೇಕರ್ ಅಳವಡಿಕೆ ಮಾಡಲಾಗಿದೆ. ಇದೀಗ ಆರೋಗ್ಯವಾಗಿದ್ದಾರೆ ಎಂದು ಶಾಮನೂರು ಮನೆಯ ಮೂಲಗಳಿಂದ ತಿಳಿದು ಬಂದಿದೆ.

    ಶಿವಶಂಕರಪ್ಪ ಅವರ ಮಗ ಎಸ್ ಎಸ್ ಮಲ್ಲಿಕಾರ್ಜುನ, ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದಾರೆ ಮತ್ತು ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ

Recent Articles

spot_img

Related Stories

Share via
Copy link
Powered by Social Snap