ಗ್ಯಾರೆಂಟಿ ಯೋಜನೆ ಎಂದೂ ನಿಲ್ಲುವುದಿಲ್ಲ : ಸಿಎಂ

ಬೆಂಗಳೂರು:

        ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಶುಕ್ರವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.5 ವರ್ಷಗಳ ಸಂಪೂರ್ಣ ಅವಧಿಯವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

    ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಜಾರಿ ಮಾಡಿದ್ದೇವೆ. ಆದರೆ ಬಿಜೆಪಿಯವರು ಟೀಕೆ ಮಾಡಿದರು. ಆದರೆ ಅವರ ಟೀಕೆಗೆ ನಾವು ತಲೆ ಕೆಡಿಸಿಕೊಳ್ಳಲಿಲ್ಲ. ಗ್ಯಾರಂಟಿ ಬಗ್ಗೆ ಎಲ್ಲಾ ರೀತಿಯ ಆರೋಪ ಮಾಡಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಯಾಗಲ್ಲ ಎಂದು ಅಪ್ಪಟ ಸುಳ್ಳು ಹೇಳಿದ್ದರು. ಆದರೆ, ನಾವು ಹೇಳಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದು ಹೇಳಿದರು.

    ನಮ್ಮ ಗ್ಯಾರಂಟಿಗಳು ಬಿಜೆಪಿಯವರ ಮನೆ ಬಾಗಿಲಿಗೂ ಮುಟ್ಟಿದೆ. ಬಿಜೆಪಿ ಮತದಾರರೂ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ಇವರನ್ನು ಅವಮಾನಿಸಬೇಡಿ. ನಮ್ಮ ಗ್ಯಾರಂಟಿಗಳು ನಾಡಿನ‌ ಜನರ ಹಕ್ಕು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಲ್ಲ ಎಂದು ಮೋದಿ, ಬೊಮ್ಮಾಯಿ, ಆರ್.ಅಶೋಕ್, ವಿಜಯೇಂದ್ರ ಯಡಿಯೂರಪ್ಪ ಎಲ್ಲರೂ ಸುಳ್ಳಿನ ಮೇಲೆ ಸುಳ್ಳು ಹೇಳಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap