ಬೆಂಗಳೂರು:
ರಾಜ್ಯದಲ್ಲಿ ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಪಡಿಸಲಾಗಿದೆ. ಆದರೆ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಕಲಿಕಾ ಮಟ್ಟ ಮಹತ್ವದ್ದಾಗಿದ್ದು, ಈ ನಿಟ್ಟಿನಲ್ಲಿ ಎಸ್.ಎಸ್.ಎಲ್. ಸಿ. ವಿದ್ಯಾರ್ಥಿಗಳಿಗೆ 2 ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಗಣಿತ ಹಾಗೂ ಸಮಾಜ ವಿಜ್ಞಾನ ಮೂರು ವಿಷಯ ಸೇರಿಸಿ ಒಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಇನ್ನೊಂದು ಭಾಷೆಗೆ ಸಂಬಂಧಿಸಿದ ಪರೀಕ್ಷೆ. ಐಚ್ಛಿಕ ಭಾಷೆಗಳಿಗೆ ಒಂದೇ ಪೇಪರ್ ಇರಲಿದ್ದು, ಬಹು ಆಯ್ಕೆ ಮಾದರಿ ಪ್ರಶ್ನೆ ಪತ್ರಿಕೆ ನೀಡಲಾಗುತ್ತದೆ.
ಪರೀಕ್ಷಾ ಫಲಿತಾಂಶವನ್ನು ಗ್ರೇಡಿಂಗ್ ಆಧಾರದಲ್ಲಿ ನೀಡಲಾಗುವುದು. ಆದರೆ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದಿಲ್ಲ ಎಂದವರು ತಿಳಿಸಿದ್ದಾರೆ.
ರಾಜ್ಯಾದ್ಯಂತ ಆರು ಸಾವಿರ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಂದು ಡೆಸ್ಕ್ ನಲ್ಲಿ ಓರ್ವ ವಿದ್ಯಾರ್ಥಿಯಂತೆ ಪ್ರತೀ ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿರುವಂತೆ ವ್ಯವಸ್ಥೆ ಕಲ್ಪಿಸಲಾಗುವುದು. ಪರೀಕ್ಷಾರ್ಥಿಗಳಿಗೆ N-95 ಮಾಸ್ಕ್ ನೀಡಲಾಗುವುದು. ಪರೀಕ್ಷೆ ಬರುವ ಎಲ್ಲ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೋವಿಡ್ ಲಸಿಕೆ ವ್ಯವಸ್ಥೆ ಮಾಡುತ್ತೇವೆ. ಅದೇರೀತಿ ಪರೀಕ್ಷಾ ಕೊಠಡಿ ಮೇಲ್ವಿಚಾರಕರಿಗೂ ಕಡ್ಡಾಯ ಲಸಿಕೆ ಹಾಕಿಸಿಕೊಳ್ಳಲು ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/05/sslc-Exam.gif)