ಮೇ 2ನೇ ವಾರ SSLC ಪರೀಕ್ಷೆ ಫಲಿತಾಂಶ

ವಿಜಯಪುರ (ಆಲಮಟ್ಟಿ): 

   ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆದು, ಮುಕ್ತಾಯಗೊಂಡಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಶೈಕ್ಷಣಿಕ ಪ್ರಗತಿ ಪರಿಶೀಲನೆಗಾಗಿ ವಿಜಯಪುರಕ್ಕೆ ಆಗಮಿಸಿರುವ ಸಚಿವರು, ಆಲಮಟ್ಟಿಯಲ್ಲಿ ಸೋಮವಾರ (ಏ.11) ಸುದ್ದಿಗಾರರ ಜೊತೆ ಮಾತನಾಡಿದರು.

ಐಪಿಎಲ್‌ಗೆ 15 ವರ್ಷಗಳ ಸಂಭ್ರಮ; ವಿಶೇಷ ವಿಡಿಯೊ ನೋಡಿ

‘ಮಾ. 28ರಿಂದ ಆರಂಭವಾದ ಪರೀಕ್ಷೆ ರಾಜ್ಯದಾದ್ಯಂತ ಸುಸೂತ್ರವಾಗಿ ನಡೆದು, ಮುಕ್ತಾಯವಾಗಿದೆ. ಒಂದು ಪರೀಕ್ಷಾ ಕೇಂದ್ರದಲ್ಲಿ ಮಾತ್ರ ಪರೀಕ್ಷಾ ಅಕ್ರಮ ವರದಿಯಾಗಿದೆ. ಈ ಸಂಬಂಧ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ’ ಎಂದು ಸಚಿವರು ತಿಳಿಸಿದರು.‘ಮೊದಲ ಬಾರಿ ಪರೀಕ್ಷೆ ಬರೆಯುತ್ತಿರುವವರಲ್ಲಿ ಹಾಜರಾತಿ ಪ್ರಮಾಣ ಶೇ.98ಕ್ಕಿಂತ ಹೆಚ್ಚು ಇದೆ. ಆದರೆ, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಗೈರು ಹಾಜರಾತಿ ಪ್ರಮಾಣ ಎಂದಿನಂತೆ ಮುಂದುವರೆದಿದೆ’ ಎಂದು ಸಚಿವರು ಮಾಹಿತಿ ನೀಡಿದರು.

ನಾಯಿಮರಿ ಹೊತ್ತೊಯ್ದ ಚಿರತೆ ಸಿಸಿಟಿವಿ ಯಲ್ಲಿ ಸೆರೆಯಾದ ದೃಶ್ಯ

‘ನಾಳೆಯಿಂದ (ಏ.12) ಕೀ ಉತ್ತರಗಳು, ಉತ್ತರಗಳಿಗೆ ಆಕ್ಷೇಪಣೆ ಕರೆಯುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳು ಆರಂಭವಾಗುತ್ತವೆ. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗುತ್ತದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ. ಜೂನ್ 4ನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ’ ಎಂದು ಸಚಿವರು ಮಾಹಿತಿ ನೀಡಿದರು.

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಇನ್ಮುಂದೆ ಪೋಡಿ, ಹದ್ದುಬಸ್ತು, ಇತರೆ ನಕ್ಷೆಗಳು ‘ಆನ್ ಲೈನ್’ನಲ್ಲೇ ಲಭ್ಯ

‘ಸಮವಸ್ತ್ರ ವಿಚಾರವಾಗಿ ಶಾಲೆಗಳಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಅನಾರೋಗ್ಯ ಲಕ್ಷಣಗಳು ಕಂಡು ಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಪರೀಕ್ಷೆಯ ಅವಧಿಯಲ್ಲಿ ಯಾವೊಬ್ಬ ವಿದ್ಯಾರ್ಥಿಗೂ ಕೋವಿಡ್ ಪಾಸಿಟಿವ್ ಬಂದಿಲ್ಲ’ ಎಂದು ಸಚಿವ ನಾಗೇಶ್ ಮಾಹಿತಿ ನೀಡಿದರು.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap