ಬೆಂಗಳೂರು:
ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆ
2021-22ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಮಂಗಳವಾರ ಪ್ರಕಟಿಸಿದೆ. ಮಂಗಳವಾರ ಪ್ರಕಟಿಸಿದ ಅಂತಿಮ ವೇಳಾಪಟ್ಟಿಯ ಪ್ರಕಾರ, ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿವೆ.
ಮಾರ್ಚ್ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಏಪ್ರಿಲ್ 1ರಂದು ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ರಂದು ಸಮಾಜ ವಿಜ್ಞಾನ, ಏಪ್ರಿಲ್ 8 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷಾ ಸಮಯ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗಿದೆ. ಮಾರ್ಚ್ 12ರಂದು ಅಭ್ಯರ್ಥಿಗಳಿಗೆ ಪ್ರಾಯೋಗಿಕ ಮತ್ತು ಆಯಾ ಕೇಂದ್ರಗಳಲ್ಲಿ ನಡೆಸಲಾಗುವುದು. ಅಂಧ, ಕಿವುಡು ಮತ್ತು ಕಲಿಕಾ ನೂನ್ಯತೆ ಇರುವ ಮಕ್ಕಳಿಗೆ ಪರೀಕ್ಷೆ ಬರೆಯಲು ನಿಗದಿಪಡಿಸಿದ ಸಮಯದ ಜೊತೆಗೆ 1 ಗಂಟೆಯ ಸಮಯವನ್ನು ಹೆಚ್ಚುವರಿಯಾಗಿ ನೀಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ಮಹಾಮಾರಿ ಕೊರೋನಾ ವೈರಸ್ ಅಬ್ಬರದ ನಡುವೆಯೂ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಈಗ ಮುಖ್ಯಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ