ಬೆಳಗಾವಿ:
ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ನಗರದ ವಡಗಾವಿ ಪ್ರದೇಶದ ಕಲ್ಮೇಶ್ವರ ರಸ್ತೆಯ ನಿವಾಸಿ ಸುಜಾತಾ ಸುಭಾಷ್ ಢಗೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಎಸ್‌ಎಸ್‌ಎಲ್ ಸಿ ಪರೀಕ್ಷೆ ಕೊನೆಯ ಕ್ಷಣದಲ್ಲಿ ರದ್ದಾಗಬಹುದೆಂಬ ನಿರೀಕ್ಷೆಯಲ್ಲಿದ್ದ ಈ ವಿದ್ಯಾರ್ಥಿನಿ ಪರೀಕ್ಷೆ ನಡೆಯುವುದು ಖಾತ್ರಿಯಾದ ಬಳಿಕ, ಬುಧವಾರ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಸಂಬಂಧ ಶಹಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ