ಎಸ್ಎಸ್ಎಲ್ಸಿ ಪರೀಕ್ಷೆ:
ಎಸ್ಎಸ್ಎಲ್ಸಿ ಪರೀಕ್ಷೆಗೆ ಕೌಂಟ್ ಡೌನ್ ಪ್ರಾರಂಭವಾಗಿದ್ದು, ಮಾರ್ಚ್ 28ರ ಸೋಮವಾರದಿಂದ ರಾಜ್ಯಾದ್ಯಂತ ಪರೀಕ್ಷೆ ಆರಂಭವಾಗಲಿದೆ.
70 ವರ್ಷ ಮೇಲ್ಪಟ್ಟ ನಿವೃತ್ತ ಸರ್ಕಾರಿ ನೌಕರ ಪಿಂಚಣಿ ಹೆಚ್ಚಳ ಕುರಿತು ಪರಿಶೀಲನೆ : ಸಿಎಂ
ಈ ಬಾರಿ 8,73,846 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದ 15,387 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದು, ಪರೀಕ್ಷೆ ಬರೆಯಲು 45,289 ಪರೀಕ್ಷಾ ಕೊಠಡಿಗಳ ಸಿದ್ಧತೆ ಮಾಡಲಾಗಿದೆ. 3,444 ಮುಖ್ಯ ಅಧೀಕ್ಷಕರ ನೇತೃತ್ವದಲ್ಲಿ SSLC ಪರೀಕ್ಷೆ ನಡೆಯಲಿದ್ದು, 49,817 ಕೊಠಡಿ ಮೇಲ್ವಿಚಾರಕರು ಭಾಗಿಯಾಗಲಿದ್ದಾರೆ.
ಮಾರ್ಚ್ 28 ರಿಂದ ಎಪ್ರಿಲ್ 11ರವರೆಗೆ ಪರೀಕ್ಷೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 8,73,846 ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳು ಈ ವರ್ಷ ಎಕ್ಸಾಂ ಬರೆಯುತ್ತಿದ್ದಾರೆ. ಅದರಲ್ಲಿ 4,52,732 ಗಂಡು ಮಕ್ಕಳು ಹಾಗೂ 4,21,110 ಹೆಣ್ಣು ಮಕ್ಕಳಿದ್ದಾರೆ. 04 ಜನ ತೃತಿಯ ಲಿಂಗಿಗಳು ಈ ಬಾರಿ ಪರೀಕ್ಷೆ ಎದುರಿಸುತ್ತಿದ್ದಾರೆ. ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ.
ಪರೀಕ್ಷೆಗೆ ನೋಂದಾಯಿಸಿರುವ 15,387 ಶಾಲೆಗಳಲ್ಲಿ 5,717 ಸರ್ಕಾರಿ ಶಾಲೆಗಳು, 3,412 ಅನುದಾನಿತ ಶಾಲೆಗಳು ಹಾಗೂ 6,258 ಅನುದಾನ ರಹಿತ ಶಾಲೆಗಳಿವೆ. 3,444 ಪರೀಕ್ಷಾ ಕೇಂದ್ರಗಳಲ್ಲಿ 3,275 ಸಾಮಾನ್ಯ ಕೇಂದ್ರಗಳು ಹಾಗೂ 169 ಖಾಸಗಿ ಕೇಂದ್ರಗಳಿವೆ.
ಹಿಜಾಬ್ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ:
ಮಾರ್ಚ್ 28ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ಹಿಜಾಬ್ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ನಲ್ಲಿ ಕೋರಲಾಗಿತ್ತು. ಆದರೆ ಇದಕ್ಕೆ ಸುಪ್ರೀಂ ನಿರಾಕರಿಸಿದೆ. ಅರ್ಜಿಯಲ್ಲಿ ವಿದ್ಯಾರ್ಥಿನಿ ಪರ ವಕೀಲ ದೇವದತ್ತ ಕಾಮತ್, ‘ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕೊಡುವುದಿಲ್ಲ.
ವಿದ್ಯಾರ್ಥಿನಿಯರು ಶೈಕ್ಷಣಿಕ ವರ್ಷ ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ತುರ್ತಾಗಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಬೇಕು’ ಎಂದು ಕೋರಿಕೊಂಡಿದ್ದರು. ಈ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಸಿಜೆಐ N.V.ರಮಣ, ವಿಷಯವನ್ನು ಅತಿರಂಜಿತಗೊಳಿಸಬೇಡಿ, ಹಿಜಾಬ್‌ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ ಎಂದು ನುಡಿದಿದ್ದಾರೆ. ವಿದ್ಯಾರ್ಥಿನಿಯರ ಮುಂದಿನ ನಿರ್ಧಾರದ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿಯಬೇಕಿದೆ.
ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಉಚಿತ ಪ್ರಯಾಣಕ್ಕೆ ಅವಕಾಶ
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಚಿತ ಪ್ರಯಾಣಕ್ಕೆ ಕೆಎಸ್‌ಆರ್‌ಟಿಸಿ ಅವಕಾಶ ಮಾಡಿಕೊಟ್ಟಿದೆ. ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದ್ದು, ಪರೀಕ್ಷಾ ಕೇಂದ್ರದವರೆಗೆ ನಿಗಮದ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಆಧಿಕಾರಿಗಳು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಿಗೆ ಹೋಗುವಾಗ ಹಾಗೂ ಹಿಂತಿರುಗುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ. ಹೊರವಲಯ ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲು ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ಕೇಂದ್ರದ ಬಳಿ ಬಸ್ ಹತ್ತಲು ಹಾಗೂ ಇಳಿಯಲು ಕೂಡ ಅವಕಾಶ ಮಾಡಲಾಗುವುದು.
ಈಗಾಗಲೇ ಎಲ್ಲಾ ನಿಯಮಗಳನ್ನು ಪಾಲಿಸುವಂತೆ ಬಸ್ ಚಾಲಕ ನಿರ್ವಾಹಕರುಗಳಿಗೆ ಸೂಚಿಸಲಾಗಿದೆ. ಇನ್ನೂ ಪರೀಕ್ಷಾ ಕೇಂದ್ರದ ಬಳಿಯೇ ನಿಲುಗಡೆಗೆ ಸೂಚಿಸಲಾಗಿದೆ ಎಂದು ಕೆಎಸ್‌ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಾರ್ಚ್ 28ರಿಂದ ಏ.11ರವರೆಗೆ 15 ದಿನ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಪರೀಕ್ಷಾ ಕೇಂದ್ರದ ಸುತ್ತ ಇರುವ ಜೆರಾಕ್ಸ್, ಕಂಪ್ಯೂಟರ್ ಸೆಂಟರ್, ಸೈಬರ್ ಸೆಂಟರ್ಗಳನ್ನ ಮುಚ್ಚುವಂತೆ ಆದೇಶಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ