ಎಸ್‌ಎಸ್‌ಎಲ್ ಸಿ ಪರೀಕ್ಷೆಯ ವೇಳಾಪಟ್ಟಿ ನಾಳೆ ಪ್ರಕಟ!!?

ಬೆಂಗಳೂರು :

 

      ಲಾಕ್ ಡೌನ್ ನಿಂದ ಮುಂದೂಡಿಕೆಯಾಗಿರುವ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ವೇಳಾಪಟ್ಟಿ ನಾಳೆ ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. 

      ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ವೇಳಾಪಟ್ಟಿ ನಿಗದಿ ಪಡಿಸುವ ಸಂಬಂಧ ನಾಳೆ ಮಹತ್ವದ ಸಭೆ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಅವರು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ನಾಳೆ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

      ಈ ಹಿಂದೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದ ಸುರೇಶ್‍ಕುಮಾರ್, ಪರೀಕ್ಷೆ ನಡೆಸಲು ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚನೆ ಕೊಟ್ಟಿದ್ದರು.

      ಯಾರು ಎಲ್ಲಿ ಪರೀಕ್ಷೆ ಬರೆಯಲು ಇಷ್ಟ ಪಡುತ್ತಾರೋ ಅಂತಹ ಕೇಂದ್ರಗಳಲ್ಲೇ ಅವಕಾಶ ನೀಡುವುದು, ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಕೊಠಡಿಗಳಲ್ಲಿ ಸಾಮಾಜಿಕ ಅಂತರ, ಸ್ಯಾನಿಟೈಜರ್ ಬಳಕೆ, ಥರ್ಮಲ್ ಪರೀಕ್ಷೆ ಸೇರಿದಂತೆ ಕೊರೊನಾ ಸೋಂಕು ಹಬ್ಬದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಬಂಧಪಟ್ಟವರಿಗೆ ಸಚಿವರು ಸೂಚನೆ ನೀಡಿದ್ದರು. ಎಲ್ಲೆಲ್ಲಿ ಪರೀಕ್ಷಾ ಕೇಂದ್ರಗಳು ಆರಂಭವಾಗಲಿವೆಯೋ  ಅಂತಹ ಕಡೆ ಈಗಾಗಲೇ ಪರೀಕ್ಷೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. 

      ಈಗಾಗಲೇ ಬಹುತೇಕ ಕಡೆ ಸಿದ್ಧತೆಗಳನ್ನು ಪೂರ್ಣ ಗೊಳಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧರಾಗುವಂತೆ ಮೌಖಿಕವಾಗಿ ಸೂಚನೆ ಕೊಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ 15 ದಿನಗಳ ಮುಂಚಿತವಾಗಿ ವೇಳಾಪಟ್ಟಿ ಪ್ರಕಟಿಸಲು ಇಲಾಖೆ ಸಿದ್ಧತೆ ನಡೆಸಿದೆ.

     ನಾಳೆ ನಡೆಯಲಿರುವ ಸಭೆಯಲ್ಲಿ ಪೂರ್ವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದು ವೇಳಾಪಟ್ಟಿ ಪ್ರಕಟಣೆ ಮಾಡುವ ನಿರೀಕ್ಷೆ ಇದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap