ಆರ್ಮ್‌ ಸ್ಟ್ರಾಂಗ್‌ ಹತ್ಯೆ : ಹಂತಕರ ಬಂಧನಕ್ಕೆ ಕ್ರಮ : ಸ್ಟಾಲಿನ್

ಚೆನ್ನೈ:

   ಬಿಎಸ್ ಪಿ ತಮಿಳುನಾಡು ಅಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಗೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಶನಿವಾರ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮಧ್ಯರಾತ್ರಿಯ ಕಾರ್ಯಾಚರಣೆಯಲ್ಲಿ ಹಂತಕರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

   52 ವರ್ಷದ ಬಿಎಸ್‌ಪಿ ನಾಯಕನನ್ನು ಶುಕ್ರವಾರ ರಾತ್ರಿ ಪೆರಂಬೂರ್‌ನಲ್ಲಿರುವ ಅವರ ಮನೆಯ ಸಮೀಪ ಬೈಕ್‌ನಲ್ಲಿ ಬಂದ ಆರು ಮಂದಿಯ ಗ್ಯಾಂಗ್ ಭೀಕರವಾಗಿ ಹತ್ಯೆ ಮಾಡಿದೆ. ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಹತ್ಯೆಯಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ” ಎಂದು ಸ್ಟಾಲಿನ್ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ.  

   ತನಿಖೆಯನ್ನು ತ್ವರಿತವಾಗಿ ನಡೆಸಿ ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗುವಂತೆ ನೋಡಿಕೊಳ್ಳಲು ಪೊಲೀಸರಿಗೆ ಆದೇಶಿಸಿದ್ದೇನೆ. ದುಃಖತಪ್ತ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ ಮತ್ತು ಸಹಾನುಭೂತಿ ತಿಳಿಸಲು ನಾನು ಬಯಸುತ್ತೇನೆ ಎಂದು ತಮಿಳುನಾಡು ಸಿಎಂ ಹೇಳಿದ್ದಾರೆ.

   ಬಿಎಸ್‌ಪಿ ರಾಜ್ಯಾಧ್ಯಕ್ಷರ ಹತ್ಯೆಗೆ ಸಂಬಂಧಿಸಿದಂತೆ ಕನಿಷ್ಠ ಎಂಟು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

   ಪ್ರಕರಣವನ್ನು ಭೇದಿಸಲು ಪೊಲೀಸರ 10 ತಂಡಗಳನ್ನು ರಚಿಸಲಾಗಿದೆ ಎಂದು ಹೆಚ್ಚುವರಿ ಆಯುಕ್ತ(ಉತ್ತರ) ಆಸ್ರಾ ಗರ್ಗ್ ಶುಕ್ರವಾರ ತಡರಾತ್ರಿ ಸುದ್ದಿಗಾರರಿಗೆ ತಿಳಿಸಿದ್ದರು.

Recent Articles

spot_img

Related Stories

Share via
Copy link
Powered by Social Snap