ಬೆಂಗಳೂರು:
ತೀವ್ರ ಕುತೂಹಲ ಮೂಡಿಸಿದ್ದಂತ ರಾಜ್ಯ ಬಜೆಟ್ ಮಂಡನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಕಾಂಗ್ರೆಸ್ ಗದ್ದಲದ ನಡುವೆಯೂ ಸಿಎಂ ಬಸವರಾಜ ಬೊಮ್ಮಾಯಿ ಮಾರ್ಚ್ 4ಕ್ಕೆ ರಾಜ್ಯ ಬಜೆಟ್ ಮಂಡಿಸೋದಾಗಿ ಘೋಷಣೆ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತನ ಹತ್ಯೆ ಪ್ರಕರಣ ಸಂಬಂಧ ಕಾಂಗ್ರೆಸ್ ಕೈವಾಡವಿದೆ ಎಂಬುದಾಗಿ ಆರೋಪಿಸಿದಂತ ಬಿಜೆಪಿ ನಾಯಕರ ವಿರುದ್ಧ ಸದನದಲ್ಲಿ ಭಾವಿಗಿಳಿದು ಕಾಂಗ್ರೆಸ್ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ತನಿಖೆಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ.
ಈ ಮಧ್ಯ ಸದನದಲ್ಲಿ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾರ್ಚ್.4ರಂದು ರಾಜ್ಯ ಬಜೆಟ್ ಮಂಡಿಸೋದಾಗಿ ಸ್ಪೀಕರ್ ಅನುಮತಿಯನ್ನು ಕೋರಿದರು. ಇದಕ್ಕೆ ಒಪ್ಪಿಗೆ ಸೂಚಿಸಿದ ಬಳಿಕ, ಕಾಂಗ್ರೆಸ್ ಸದಸ್ಯರ ಗದ್ದಲ-ಕೋಲಾಹಲದಿಂದಾಗಿ ವಿಧಾನಸಭೆಯನ್ನು ಮಾರ್ಚ್ 4ರವರೆಗೆ ಮುಂದೂಡಿಕೆ ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
