ಬಿಎಸ್ ವೈ ರನ್ನು ಮುಖ್ಯಮಂತ್ರಿ ಮಾಡಿ, ಸಮ್ಮಿಶ್ರ ಸರ್ಕಾರವನ್ನು ಸ್ಮಶಾನಕ್ಕೆ ಕಳಿಸ್ತೀವಿ : ಈಶ್ವರಪ್ಪ

ಶಿವಮೊಗ್ಗ:

      ಸಮ್ಮಿಶ್ರ ಸರ್ಕಾರವನ್ನು ಸ್ಮಶಾನಕ್ಕೆ ಕಳುಹಿಸಿ ಯಡಿಯೂರಪ್ಪ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡ್ತೀವಿ ಎಂದು  ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.

      ರಾಜ್ಯದಲ್ಲಿ ಗೂಂಡಾ ಸರ್ಕಾರ ಅಸ್ತಿತ್ವದಲ್ಲಿದೆ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಗೂಂಡಾಗಳಂತೆ ವರ್ತಿಸುತ್ತಿದ್ದಾರೆ ಎಂದು ಸಮ್ಮಿಶ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

      ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಕರೆತರಲು ಆಮಿಷವೊಡ್ಡಲಾಗುತ್ತಿದೆ ಎಂಬ ಸುಳ್ಳು ಆರೋಪ ಮಾಡಿ ಯಡಿಯೂರಪ್ಪ ಅವರ ನಿವಾಸದ ಎದುರು ಉದ್ದೇಶಪೂರ್ವಕವಾಗಿ ಗಲಾಟೆ ನಡೆಸಲಾಗಿದೆ.ಅವರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ. ಅವರು ಕೂಡಲೇ ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಈಶ್ವರಪ್ಪ ಆಗ್ರಹಿಸಿದ್ದರು.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap