ಬೆಂಗಳೂರು :
ರಾಜ್ಯದ ಜನರಿಗೆ ಸರ್ಕಾರ ಶಾಕ್ ನೀಡಿದ್ದು, ವಿದ್ಯುತ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಎಸ್ಕಾಂಗಳಿಂದ ವಿದ್ಯುತ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಯೂನಿಟ್ ಗೆ 1.96 ರೂ. ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಕಳೆದ ಮಾರ್ಚ್ ನಿಂದಲೇ ದರ ಹೆಚ್ಚಳವಾಗಬೇಕಿತ್ತು. ಕೊರೋನಾ ಕಾರಣದಿಂದ ತಡೆಹಿಡಿಯಲಾಗಿದ್ದ ದರ ಹೆಚ್ಚಳ ಪ್ರಸ್ತಾವಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಬೆಸ್ಕಾಂ ವ್ಯಾಪ್ತಿಯಲ್ಲಿ 40 ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಆದೇಶ ಹೊರಡಿಸಲಾಗಿದೆ.
ನವೆಂಬರ್ 1 ರಿಂದಲೇ ಅನ್ವಯವಾಗುವಂತೆ ಪರಿಷ್ಕೃತ ದರ ಜಾರಿಯಾಗಲಿದ್ದು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ರಾಜ್ಯದ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
