ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ …..!

ಬೆಂಗಳೂರು :

   ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 7ನೇ ವೇತನ ಆಯೋಗ ವರದಿ ಜಾರಿಗೆ ರಾಜ್ಯ ಸರ್ಕಾರವು ಸಿದ್ದವಾಗಿದ್ದು, ವೇತನ ಪರಿಷ್ಕರಣೆ ಸಹಿತ ಹಲವು ಸವಲತ್ತುಗಳನ್ನು ನೀಡುವ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ಸಮಿತಿ ನೀಡಿರುವ ಶಿಫಾರಸುಗಳನ್ನು ಅನುಷ್ಠಾನಿಸಲು ಮುಂದಾಗಿದೆ.

    ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜುಲೈ 1ರಿಂದ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ, ಜುಲೈ 1ರಿಂದ ಅನ್ವಯವಾಗುವಂತೆ ಪರಿಷ್ಕೃತ ವೇತನ ನೀಡಲು ಕ್ರಮಕೈಗೊಳ್ಳಲಾಗುತ್ತದೆ ಎಂದು ಮೂಲಗಳು ಹೇಳಿವೆ.

    ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿ, ವರದಿ ಸಲ್ಲಿಸಲು ನಿವೃತ್ತ ಮುಖ್ಯಕಾರ್ಯದರ್ಶಿ ಕೆ.ಸುಧಾಕರ್‌ ರಾವ್ ಅಧ್ಯಕ್ಷತೆಯಲ್ಲಿ 2022ರ ನವೆಂಬರ್‌ 19ರಂದು ಆಯೋಗ ರಚಿಸಲಾಗಿತ್ತು. ಆರು ತಿಂಗಳು ನೀಡಿದ್ದ ಅವಧಿಯನ್ನು ಎರಡು ಬಾರಿ ವಿಸ್ತರಿಸಿದ ನಂತರ ಈ ಮಾರ್ಚ್‌ 16ರಂದು ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ವರದಿ ಸಲ್ಲಿಕೆಯಾದ ದಿನದಿಂದಲೇ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿತ್ತು. ಹಾಗಾಗಿ, ವೇತನ ಪರಿಷ್ಕರಣೆ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿರಲಿಲ್ಲ.

    ಎ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಸಿ ಮತ್ತು ಡಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು ಮೂಲ ವೇತನ 17,000 ರೂ. ಇದ್ದರೆ, ತುಟ್ಟಿಭತ್ಯೆ ಶೇ. 31 (5,270 ರೂ.) ಹಾಗೂ ಶೇ.27.50 (4,675 ರೂ. ) ಫಿಟ್ಮೆಂಟ್‌ ಸೇರಿ ಒಟ್ಟು 26,945 ಸಿಗುತ್ತಿತ್ತು. ಇನ್ನು 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27,000 ಇದ್ದರೆ, ಅಂದಾಜು ತುಟ್ಟಿ ಭತ್ಯೆ ಶೇ.8.5 (2295 ರೂ), ಮನೆ ಬಾಡಿಗೆ ಭತ್ಯೆ ಶೇ.20 (5,400 ರೂ.), ವೈದ್ಯಕೀಯ 500, ನಗರ ಪರಿಹಾರ ಭತ್ಯೆ (ಸಿಸಿಎ) 750 ರೂ. ಸೇರಿ ಒಟ್ಟು 35,945 (01-01-2024ಕ್ಕೆ) ರೂ. ಸಿಗಲಿದೆ. 6ನೇ ವೇತನ ಆಯೋಗದಲ್ಲಾದರೆ ಒಟ್ಟು 29,005 ರೂ. ಸಿಗುತ್ತಿತ್ತು. ಪರಿಷ್ಕೃತ ವೇತನದಲ್ಲಿ 6940 ರೂ. ಹೆಚ್ಚಳವಾಗಲಿದೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap