ಬೆಂಗಳೂರು :
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆಯು ರಾಜ್ಯದ ಜನತೆಗೆ ವಿಶೇಷ ಸೂಚನೆಯೊಂದನ್ನು ನೀಡಿದ್ದು,
ಇಂದು(ಏ.22)
ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಭಾರೀ ಮಳೆಯಾಗಲಿದೆ.
ಏಪ್ರಿಲ್ 23 :
ನಾಳೆ ಬೆಳಗಾವಿ ಧಾರವಡ, ಗದಗ, ಹಾವೇರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 24 :
ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಶಿವಮೊಗ್ಗ, ಈ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 25 :
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 26 :
ದಕ್ಷಿಣ ಒಳನಾಡಿನ ಪ್ರದೇಶಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ