ಬೆಂಗಳೂರು :
ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಳವಾಗುತ್ತಿದ್ದು, ಇದೀಗ ಹೊರರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್ ನಿಯಮದಲ್ಲಿ ಬದಲಾವಣೆ ಮಾಡಿದೆ.
ಹೌದು, ನಮ್ಮ ರಾಜ್ಯಕ್ಕೆ ಬೇರೆ ರಾಜ್ಯದ ಕಂಟಕವೇ ಎದುರಾಗಿದೆ. ಅದರಲ್ಲೂ ಮಹಾರಾಷ್ಟ್ರದ ಮುಂಬೈ ಕಂಟಕ ಕರ್ನಾಟಕಕ್ಕೆ ದೊಡ್ಡ ಹೊಡೆತ ನೀಡುತ್ತಿದೆ. ಪ್ರತಿ ನಿತ್ಯ ಬರುವ ಪಾಸಿಟಿವ್ ಕೇಸ್ ಗಳಲ್ಲಿ ಬಹುತೇಕ ಮಹಾರಾಷ್ಟ್ರದ ನಂಟೇ ಇದೆ. ಹೀಗಾಗಿ ಆ ರಾಜ್ಯದಿಂದ ಬರುವ ಎಲ್ಲರನ್ನು ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುತ್ತಿದೆ.
ಮಹಾರಾಷ್ಟ್ರದಿಂದ ಬರುವ ಎಲ್ಲರೂ 7 ದಿನ ಸಾಂಸ್ಥಿಕ ಕ್ವಾರಂಟೈನ್ ಹಾಗೂ 7 ದಿನ ಹೋಂ ಕ್ವಾರಂಟೈನ್ ಕಡ್ಡಾಯವಾಗಿದೆ. ಮಹಾರಾಷ್ಟ್ರ ಹೊರತುಪಡಿಸಿ ಬೇರೆ ರಾಜ್ಯದಿಂದ ಬರುವವರಿಗೆ ಹೋಂ ಕ್ವಾರಂಟೈನ್ ಮಾತ್ರ ಇರುತ್ತದೆ.
ಇಷ್ಟು ದಿನ ನಮ್ಮ ರಾಜ್ಯಕ್ಕೆ ಬೇರೆ ರಾಜ್ಯದಿಂದ ಬರುವ ಎಲ್ಲರಿಗೂ ಸಾಂಸ್ಥಿಕ ಕ್ವಾರಂಟೈನ್ ಅಗತ್ಯವಾಗಿತ್ತು. ಇದೀಗ ಕ್ವಾರಂಟೈನ್ ನಿಯಮವನ್ನು ಬದಲಾವಣೆ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ