ನಿವೃತ್ತ ಕಾರ್ಯದರ್ಶಿ ರತ್ನಪ್ರಭಾ ಬಿಜೆಪಿ ಸೇರ್ಪಡೆ!!!

ಕಲಬುರಗಿ: 

      ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಬುಧವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. ಬಿ.ಎಸ್​. ಯಡಿಯೂರಪ್ಪ ಉಪಸ್ಥಿತಿಯಲ್ಲಿ ರತ್ನಪ್ರಭಾ ಬಿಜೆಪಿ ಸೇರ್ಪಡೆಯಾಗಿದ್ದಾರೆ.

      ಇಂದು ಕಲಬುರ್ಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ‌ನಾಮಪತ್ರ ಸಲ್ಲಿಕೆ ಮಾಡುತ್ತಿರುವ ಹಿನ್ನೆಲೆ ಯಡಿಯೂರಪ್ಪ ಕಲಬುರ್ಗಿಗೆ ಆಗಮಿಸುತ್ತಿದ್ದಾರೆ. 

     ಇದಕ್ಕೂ ಮುನ್ನ ಅವರು ಕಲಬುರಗಿ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಬಿಜೆಪಿಯ ಉಮೇಶ್​ ಜಾಧವ್​ ಅವರ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಬಿಜೆಪಿ ಸೇರ್ಪಡೆಗೊಂಡರು. 

      ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸ ಮೆಚ್ಚಿ ಬಿಜೆಪಿ ಸೇರ್ಪಡೆಯಾಗುತ್ತಿರುವೆ. ನಿವೃತ್ತಿ ನಂತರ ನನಗೂ ಜನ ಸೇವೆ ಮಾಡಬೇಕು ಎಂಬ ಮನಸ್ಸಿದೆ. ಹೀಗಾಗಿ ರಾಷ್ಟ್ರೀಯ ಪಕ್ಷ ಬಿಜೆಪಿ ಸೇರ್ಪಡೆಯಾಗುತ್ತಿರುವೆ. ಪಕ್ಷ ನೀಡುವ ಜವಾಬ್ದಾರಿಯನ್ನು ನಿಭಾಯಿಸುವೆ ಎಂದು ರತ್ನಪ್ರಭ ತಿಳಿಸಿದರು. 

      ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೆ.ರತ್ನಪ್ರಭಾ ಸ್ಪರ್ಧಿಸುತ್ತಾರೆಂಬ ಮಾತು ಈ ಹಿಂದೆ ಕೇಳಿಬಂದಿತ್ತು. ಈ ಹಿಂದೆ ಕಲಬುರಗಿಯಲ್ಲಿ ಪ್ರಾದೇಶಿಕ ಆಯುಕ್ತೆಯಾಗಿ ರತ್ನಪ್ರಭಾ ಸೇವೆಯನ್ನು ಸಲ್ಲಿಸಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link
Powered by Social Snap