ಬೆಂಗಳೂರು :
ರಾಜ್ಯದಲ್ಲಿ ಇಂದು 8 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 511 ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬೆಂಗಳೂರು ಹಾಗೂ ಮಂಡ್ಯದಲ್ಲಿ ತಲಾ 1 ಕೇಸ್, ದಕ್ಷಿಣ ಕನ್ನಡ, ಬಾಗಲಕೋಟೆ ಮತ್ತು ವಿಜಯಪುರದಲ್ಲಿ ತಲಾ 2 ಕೇಸ್ಗಳು ಪತ್ತೆಯಾಗಿವೆ.
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 8 ಹೊಸ #Covid19 ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 511ಕ್ಕೆ ಏರಿದೆ. ಇದುವರೆಗೆ ಒಟ್ಟು 188 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ. #ಮನೆಯಲ್ಲೇಇರಿ pic.twitter.com/JAR3SpBdoJ
— B Sriramulu (@sriramulubjp) April 27, 2020
ಈ ಮೂಲಕ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 511 ಕ್ಕೆ ಏರಿಕೆಯಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಿಂದಾಗಿ ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
