ಮಂಗಳೂರು:
ದಾಖಲೆ ರಹಿತವಾಗಿ 1 ಕೋಟಿ ರೂ.ಹಣವನ್ನು ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿ ಹಣವನ್ನು ವಶಪಡಿಸಿಕೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬೆಂಗಳೂರು ಮಲ್ಲೇಶ್ವರಂ ನಿವಾಸಿ ಮಂಜುನಾಥ (56) ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿ. ನಗರದ ಬಂದರು ಪೊಲೀಸರು ಬೆಳಗ್ಗೆ ಗಸ್ತು ತಿರುಗುತ್ತಿದ್ದಾಗ ಅನುಮಾನದ ಮೇಲೆ ತಪಾಸಣೆ ನಡೆಸಿದಾಗ ದಾಖಲೆ ರಹಿತ ಹಣ ಪತ್ತೆಯಾಗಿದೆ.
ಮಂಜುನಾಥನ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಣ ಎಲ್ಲಿಂದ ಮತ್ತು ಯಾರಿಗೆ ತಲುಪಿಸಲು ಸಾಗಾಟ ಮಾಡಲಾಗುತ್ತಿತ್ತು ಎನ್ನುವುದು ತನಿಖೆಯಿಂದ ಗೊತ್ತಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ