ಬೆಂಗಳೂರು:
ರಾಜ್ಯದಲ್ಲಿ ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆ ತೀವ್ರಗೊಂಡಿರುವ ಬೆನ್ನಲ್ಲೇ
ಸಿಲಿಕಾನ್ ಸಿಟಿಯಲ್ಲಿ ಮತ್ತೆ 1 ಕೋಟಿ ರೂ. ಗೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿಮಾಡಿಕೊಳ್ಳಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕವಸ್ತು ವಶಕ್ಕೆ ಪಡೆಯಲಾಗಿದೆ.
ಕಸ್ಟಮ್ ಅಧಿಕಾರಿಗಳು 1ಕೋಟಿ ರೂ.ಗೂ ಅಧಿಕ ಮೊತ್ತದ ಮಾದಕ ವಸ್ತುಗಳನ್ನು ಜಪ್ತಿಮಾಡಿಕೊಂಡಿದ್ದಾರೆ.
ಎಂಡಿಎಂಎ, ಎಕ್ಸ್ ಟಸಿ ಮಾತ್ರೆಗಳನ್ನು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಬೆಲ್ಜಿಯಂ ನಿಂದ ಮಾದಕ ವಸ್ತುಗಳನ್ನು ತರಿಸಲಾಗಿತ್ತು. ಮಸಾಜ್ ಮಾಡುವ ಮಷಿನ್ ಪಾರ್ಸಲ್ ನಲ್ಲಿ ಮಾದಕವಸ್ತು ಪತ್ತೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/09/ganja-siezed.gif)