ಮಂಡ್ಯ:
ಕಾರು ಹಾಗೂ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಅಪಘಾತ ನಡೆದಿದ್ದು, ರಾಂಗ್ ಸೈಡ್ ನಲ್ಲಿ ಬಂದ ಟ್ರಾಕ್ಟರ್ ಚಾಲಕ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ.
ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ನಡೆದ ನಂತರ ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ವಿವರ ಇನ್ನೂ ದೊರೆತಿಲ್ಲ.
ಕಾರು ಬೆಂಗಳೂರಿನಿಂದ ಹಾಸನಕ್ಕೆ ತೆರಳುತ್ತಿತ್ತೆನ್ನಲಾಗಿದ್ದು, ಅಪಘಾತದ ಬಳಿಕ ಟ್ರಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
