ಬೆಂಗಳೂರು:
ಕಸ್ಟಮ್ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.28 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಬುಧವಾರ ರಾತ್ರಿ ದಾಳಿ ನಡೆಸಿದ ಅಧಿಕಾರಿಗಳು, ಅಲ್ಲಿದ್ದ ಗಾಂಜಾ ಜಪ್ತಿ ಮಾಡಿದ್ದಾರೆ.
ಮುಂಬೈನಲ್ಲಿ ಎನ್ಸಿಬಿ ಅಧಿಕಾರಿಗಳು ಅಹ್ಮದ್ ಎಂಬಾತನನ್ನು ಬಂಧಿಸಿದ ಬಳಿಕ ಆತನ ಮಾಹಿತಿಯಿಂದ ಸಿಕ್ಕ ಗಾಂಜಾ ಪೆಡ್ಲರ್ ಕೊಟ್ಟ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ವಿದೇಶದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.
ಕಸ್ಟಮ್ ಅಧಿಕಾರಿಗಳಿಗೆ ಬಂದ ಮಾಹಿತಿ ಮೇರೆಗೆ ಕಸ್ಟಮ್ ತಂಡ ಕೊರಿಯರ್ ವಿಭಾಗದಲ್ಲಿ ಪರಿಶೀಲಿಸಿದಾಗ 1.28 ಕೋಟಿ ರೂ. ಮೌಲ್ಯದ 8 ಕೆಜಿ ಮರಿಜುವಾನ ಮತ್ತು ಗಾಂಜಾ ಪತ್ತೆಯಾಗಿದೆ. ಈ ಗಾಂಜಾವನ್ನ ನಾಲ್ಕು ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಅಡಗಿಸಿಟ್ಟಿದ್ದರು. ಸದ್ಯ ಗಾಂಜಾ ಯಾರಿಗೆ ತಲುಪಬೇಕಾದದ್ದು ಎಂಬ ಮಾಹಿತಿಯನ್ನ ಪೊಲೀಸರು ಕಲೆಹಾಕಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ