ರಾಜ್ಯದಲ್ಲಿ ಅ.25 ರಿಂದ 1ರಿಂದ 5ನೇ ತರಗತಿ ಶಾಲೆ ಆರಂಭ!!

ಬೆಂಗಳೂರು: 

     ಕೊರೊನಾ ವೈರಸ್ ಕಾರಣದಿಂದ ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಿಂದ ನಿಲ್ಲಿಸಲಾಗಿದ್ದ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, 

    ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದು, ಆಕ್ಟೋಬರ್‌ 25ರಿಂದ 1ರಿಂದ 5ರ ತನಕ ಶಾಲೆ ಶುರು ಮಾಡುವುದಕ್ಕೆ ಶಾಲೆ ಆರಂಭಕ್ಕೆ ಕೋವಿಡ್‌ ತಾಂತ್ರಿಕ ಸಮಿತಿ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

     ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ. ಅನುಮತಿ ಪತ್ರದಲ್ಲಿ ವಿದ್ಯಾರ್ಥಿಗೆ ಕೋವಿಡ್ ಇಲ್ಲದೆ ಇರೋದನ್ನ ಪೋಷಕರು ಧೃಢಿಕರಿಸಬೇಕು ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ