ಬೆಂಗಳೂರು :
ರಾಜ್ಯದಲ್ಲಿ ಇಂದು 10 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 858 ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಲಬುರ್ಗಿಯಲ್ಲಿ ಒಬ್ಬರಿಗೆ, ದಾವಣಗರೆಯಲ್ಲಿ ಮೂವರಿಗೆ, ಹಾವೇರಿಯಲ್ಲಿ ಒಬ್ಬರಿಗೆ, ಬಾಗಲಕೋಟೆಯ ಇಬ್ಬರಿಗೆ, ವಿಜಯಪುರದ ಒಬ್ಬರಿಗೆ ಮತ್ತು ಬೀದರ್ ನ ಇಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.
Covid19: Morning Bulletin
Total Confirmed Cases: 858
Deceased: 31
Recovered: 422
New Cases: 10#KarnatakaFightsCorona #IndiaFightsCorona pic.twitter.com/ttUNiyadTJ— B Sriramulu (@sriramulubjp) May 11, 2020
ಈ ಮೂಲಕ 10 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 858 ಕ್ಕೆ ಏರಿಕೆಯಾಗಿದೆ.
ಮೊನ್ನೆ 48, ನಿನ್ನೆ 54, ಇಂದು ಕೇವಲ 10 ಕೇಸ್ ಪತ್ತೆಯಾಗಿದೆ. ಹೀಗಾಗಿ ಕರ್ನಾಟಕಕ್ಕೆ ಇಂದು ಕೊಂಚ ರಿಲೀಫ್ ಸಿಕ್ಕಂತಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ