ಬೆಂಗಳೂರು:
ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಕೂಟದ 11 ಮಂದಿ ಅತೃಪ್ತ ಶಾಸಕರು ಶನಿವಾರ ರಾಜೀನಾಮೆ ಕೊಟ್ಟಿದ್ದಾರೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಕಚೇರಿಗೆ 11 ಮಂದಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. ನಾನು ಅವರೆಲ್ಲರಿಗೂ ಸ್ವೀಕೃತಿ ಪತ್ರ ನೀಡಿ ಎಂದು ಹೇಳಿದ್ದೇನೆ. ನಾಳೆ ರವಿವಾರ, ಸೋಮವಾರ ನನಗೆ ಪೂರ್ವನಿರ್ಧರಿತ ಕಾರ್ಯಕ್ರಮಗಳಿವೆ. ಹಾಗಾಗಿ ಮಂಗಳವಾರ ಈ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದರು.
ವಿಧಾನಸೌಧದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಲು ಕಾದು ಸುಸ್ತಾದ ಅತೃಪ್ತ ಶಾಸಕರು ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಕಾರ್ಯದರ್ಶಿ ರೂಪೇಶ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿ, ಇದೀಗ ರಾಜ್ಯಪಾಲರನ್ನು ಭೇಟಿಯಾಗಲು ರಾಜಭವನದತ್ತ ತೆರಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ