ಬೆಂಗಳೂರು :
ರಾಜ್ಯದಲ್ಲಿ ಇಂದು ಮತ್ತೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಇಂದು ಮತ್ತೆ 11 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯದಲ್ಲಿನ ಕೊರೊನಾ ಸೋಂಕಿತ ಪ್ರಕರಣಗಳ ಕುರಿತಂತೆ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಅನ್ನು ಬಿಡುಗಡೆ ಮಾಡಿದೆ. ಈ ಬುಲೆಟಿನ್ ನಲ್ಲಿ ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 11 ಜನರಿಗೆ ಕೊರೊನಾ ವೈರಸ್ ಸೋಂಕಿರುವುದಾಗಿ ತಿಳಿಸಿದೆ.
ಬಾಗಲಕೋಟೆಯಲ್ಲಿ ಮೂವರಿಗೆ, ಚಿಕ್ಕಬಳ್ಳಾಪುರದಲ್ಲಿ ಒಬ್ಬರಿಗೆ, ಬೆಂಗಳೂರು ನಗರದಲ್ಲಿ ಇಬ್ಬರಿಗೆ, ಕಲಬುರ್ಗಿಯಲ್ಲಿ ಮೂವರಿಗೆ, ವಿಜಯಪುರದಲ್ಲಿ ಒಬ್ಬರಿಗೆ ಮತ್ತು ಬೆಳಗಾವಿಯಲ್ಲಿ ಒಬ್ಬರಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 258ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ