ಬೆಂಗಳೂರು :
ರಾಜ್ಯದಲ್ಲಿ ಇಂದು ಬರೋಬ್ಬರಿ 116 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲುವ ಮೂಲಕ ರಾಜ್ಯದ ಜನತೆಯಲ್ಲಿ ಆತಂಕವನ್ನುಂಟು ಮಾಡಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಈ ಪೈಕಿ ಉಡುಪಿ – 25 , ಉಳಿದಂತೆ ಮಂಡ್ಯ -15, ಮಂಡ್ಯ -15, ಬಳ್ಳಾರಿ- 11, ಉತ್ತರ ಕನ್ನಡ-9 , ಬೆಂಗಳೂರು, ಶಿವಮೊಗ್ಗ ಹಾಗೂ ದಕ್ಷಿಣ ಕನ್ನಡದಲ್ಲಿ ತಲಾ 6 , ಬೆಳಗಾವಿ ಹಾಗೂ ಧಾರವಾಡದಲ್ಲಿ ತಲಾ 5 ಕೇಸ್, ದಾವಣಗೆರೆ-3, ಚಿಕ್ಕಬಳ್ಳಾಪುರ – ಗದಗದಲ್ಲಿ ತಲಾ 2, ಮೈಸೂರು, ತುಮಕೂರು ಹಾಗೂ ವಿಜಯಪುರದಲ್ಲಿ ತಲಾ 1 ಕೇಸ್ ಗಳು ಪತ್ತೆಯಾಗಿವೆ.
116 new #COVID19 positive cases reported in Karnataka (from 5 PM y'day to 12 PM today), 14 people discharged during this period. Total positive cases in the state rises to 1568, total deaths stand at 41 and a total of 570 people have been discharged so far: Govt of Karnataka pic.twitter.com/ztywDkzoF2
— ANI (@ANI) May 21, 2020
ಈ ಮೂಲಕ ಕರ್ನಾಟಕದಲ್ಲಿ ಇಂದು 116 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಕೊರೊನಾ ಸೋಂಕಿತರ ಸಂಖ್ಯೆ 1578 ಕ್ಕೆ ಏರಿಕೆಯಾಗಿದೆ.
ಲಾಕ್ ಡೌನ್ ಸಡಿಲಿಕೆ ಬಳಿಕ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ಹಂತ ತಲುಪಲಿದೆ ಎಂಬ ಕಳವಳಕ್ಕೆ ಕಾರಣವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ