ಬೆಂಗಳೂರು :
ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಪೊಲೀಸರು ಈವರೆಗೆ 119 ಮಂದಿಯನ್ನು ಬಂಧಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮತನಾಡಿದ ಸಚಿವ ಬಸವರಾಜ ಬೊಮ್ಮಾಯಿ, ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 119 ಜನರನ್ನು ವಶಕ್ಕೆ ಪಡೆಯಲಾಗಿದೆ. ನ್ಯಾಯಲಯದ ಆದೇಶದ ಮೇರೆಗೆ ಬಂಧಿತ ಆರೋಪಿಗಳನ್ನು ರಾಮನಗರದ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಬಂಧಿತರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆ ಕಾಯ್ದೆಯ ಪ್ರಕಾರ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸುತ್ತೇವೆ. ಅಗತ್ಯವಾದರೆ ರಾಷ್ಟ್ರೀಯ ಭದ್ರತಾ ಕಾಯ್ದೆಯ ಅನ್ವಯವೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನು ಡೇಂಜರ್ ಝೋನ್ ನಲ್ಲಿರುವ ಎಲ್ಲ ಜಿಲ್ಲೆ ಮತ್ತು ಬೆಂಗಳೂರಿನ ಬಡಾವಣೆಗಳನ್ನು ಸೀಲ್ ಡೌನ್ ಮಾಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
