ಬೆಂಗಳೂರು :

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಇಂದು ಬೆಂಗಳೂರಿನ ಹೆಚ್‌ಎಎಲ್ ಪೊಲೀಸ್ ಠಾಣೆಯ 12 ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.

ಹೆಚ್‌ಎಎಲ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಹಾಗೂ 10 ಸಿಬ್ಬಂದಿಗೆ ಕೊರೊನಾ ವೈರಸ್ ತಗುಲಿದೆ ಎಂದು ವರದಿಯಾಗಿದ್ದು, ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೆಚ್‌ಎಎಲ್ ಪೊಲೀಸ್ ಠಾಣೆಯನ್ನು ಬಿಬಿಎಂಪಿ ಸೀಲ್ ಡೌನ್ ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








