ಬೆಂಗಳೂರು :
ರಾಜ್ಯದಲ್ಲಿ ಇಂದು ಹೊಸದಾಗಿ 12 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 175ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಮಂಡ್ಯ ಜಿಲ್ಲೆಯಲ್ಲಿ 3, ಬೆಂಗಳೂರಿನಲ್ಲಿ 4, ಬಾಗಲಕೋಟೆ 2, ಕಲಬುರ್ಗಿ 2 ಮತ್ತು ಗದಗ ಜಿಲ್ಲೆಯಲ್ಲಿ ಒಬ್ಬರಿಗೆ ಸೇರಿದಂತೆ ರಾಜ್ಯದಲ್ಲಿ 12 ಜನರಿಗೆ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಇರುವುದಾಗಿ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕಳೆದ ನಿನ್ನೆ 163ಕ್ಕೆ ಕೊನೆಗೊಂಡಿದ್ದಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಇಂದು 12 ಹೊಸ ಕೇಸ್ ಪತ್ತೆಯಾಗುವ ಮೂಲಕ 175ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದೆ.
ಅಂದಹಾಗೇ ಇದುವರೆಗೆ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದಾಗಿ 4 ಜನರು ಸಾವನ್ನಪ್ಪಿದ್ದರೇ, ಕೊರೊನಾ ಸೋಂಕಿತ 25 ಜನರು ಸಂಪೂರ್ಣ ಗುಣಮುಖರಾಗಿ, ಡಿಸ್ಚಾರ್ಜ್ ಆಗಿರುವುದಾಗಿ ರಿಪೋರ್ಟ್ ನಲ್ಲಿ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ