ಮೇ.23 : ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ!!

ಬೆಂಗಳೂರು :

     ಲೋಕಸಭೆ ಚುನಾವಣೆಯ ಫಲಿತಾಂಶ ಮೇ. 23 ರಂದು ಪ್ರಕಟವಾಗಲಿದ್ದು, ಈ ಹಿನ್ನೆಲೆಯಲ್ಲಿ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12ರವರೆಗೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ ಹಾಗೂ ಮದ್ಯ ಮಾರಾಟ ನಿಷೇಧವಿರುತ್ತದೆ.

     ಈ ಕುರಿತು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, ಪೊಲೀಸ್ ಇಲಾಖೆ ಚುನಾವಣಾ ಬಂದೋಬಸ್ತ್ ಗಾಗಿ ಸಿದ್ದತೆ ಮಾಡಿಕೊಳ್ಳುತ್ತಿದೆ. ಫಲಿತಾಂಶದ ದಿನ ಬೆಂಗಳೂರಿನಲ್ಲಿ 7 ಡಿಸಿಪಿಗಳು, 22 ಎಸಿಪಿಗಳು, 77 ಇನ್ಸ್ ಪೆಕ್ಟರ್ ಗಳು, 180 ಸಬ್ ಇನ್ಸ್ ಪೆಕ್ಟರ್ ಗಳು ಸೇರಿದಂತೆ 2000 ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್ ಗೆ ನೇಮಕ ಮಾಡಲಾಗಿದೆ ಹಾಗೂ ಎರಡು ಪ್ಯಾರಾ ಮಿಲಿಟರಿ ಪಡೆ, 23 ಕೆಎಸ್‌ಆರ್ ಪಿ ತುಕಡಿಗಳನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

       ಮತ ಎಣಿಕೆ ಹಾಲ್‌ ಒಳಗಡೆ ಪ್ರವೇಶಿಸಲು ಪ್ರತಿಯೊಬ್ಬರಿಗೆ ಐಡಿ ಕಾರ್ಡ್ ವ್ಯವಸ್ಥೆ ಮಾಡಲಾಗಿದ್ದು, ಐಡಿ ಇರುವವರಿಗೆ ಮಾತ್ರ ಮತ ಎಣಿಕೆ ಸೆಂಟರ್ ಒಳಗೆ ಬಿಡಲಾಗುವುದು. ಮಾಧ್ಯಮದವರಿಗೆ ಮೀಡಿಯಾ ರೂಮ್ ವರೆಗೆ ಮಾತ್ರ ಅವಕಾಶ ಇರುತ್ತದೆ. ಮೇ. 23 ರ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ರ ವರೆಗೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ ಹಾಗೂ ಮದ್ಯ ಮಾರಾಟ ನಿಷೇಧವಿರುತ್ತದೆ ಎಂದು ತಿಳಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap