ಬಿಬಿಎಂಪಿಯ 15 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢ!!!

ಬೆಂಗಳೂರು :

     ಬಿಬಿಎಂಪಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಒಟ್ಟು 15 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

     ಬಿಬಿಎಂಪಿಯ ಕಂದಾಯ ವಸೂಲಿಗಾರರು, ಕಂದಾಯ ಪರಿವೀಕ್ಷಕರು, ಇಬ್ಬರು ವಾಹನ ಚಾಲಕರು, ಆರೋಗ್ಯ ವೈದ್ಯಾಧಿಕಾರಿಗಳು, ನಾಲ್ಕನೇ ದರ್ಜೆ ನೌಕರರು, ದ್ವಿತೀಯ ದರ್ಜೆ ಸಹಾಯಕರು, ಸಹಾಯಕ ಅಭಿಯಂತರರು, ಇಬ್ಬರು ಆಯಾಗಳಿಗೆ ಸೋಂಕು ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  

      ಕೊರೊನಾ ವಾರಿಯರ್ಸ್‌ಗೆ 50 ಲಕ್ಷದ ವಿಮೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಆದರೆ, ಬಿಬಿಎಂಪಿ ಸಿಬ್ಬಂದಿಯನ್ನು ಈ ವಿಮೆ ವ್ಯಾಪ್ತಿಗೆ ಸೇರಿಸಿಲ್ಲ ಎಂಬುದು ಆರೋಪವಾಗಿದೆ. ಆದರೆ, ಬಿಬಿಎಂಪಿ ಆಯುಕ್ತರು ಸಿಬ್ಬಂದಿಗಳ ಸುರಕ್ಷತೆ ಬಗ್ಗೆ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

     ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕು ವ್ಯಾಪಕವಾಗಿ ಏರಿಕೆಯಾಗಿದೆ. ಸದ್ಯ ಪೊಲೀಸ್ ಹಾಗೂ ಆರೋಗ್ಯ ಇಲಾಖೆಯ ಕೆಲ ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ಈಗ ಬಿಬಿಎಂಪಿ ಸಿಬ್ಬಂದಿಗೂ ಮಾರಕ ಸೋಂಕು ತಗುಲಿರುವುದು ವರದಿಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap