ಬೆಂಗಳೂರು :
ರಾಜ್ಯದಲ್ಲಿ ಇಂದು 15 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 489 ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬೆಂಗಳೂರಿನಲ್ಲಿ 6 ಮಂದಿಗೆ ಕೊರನಾ ಸೋಂಕು ಕಾಣಿಸಿಕೊಂಡರೆ, ಬೆಳಗಾವಿ -06, ಮಂಡ್ಯ -01, ಚಿಕ್ಕಬಳ್ಳಾಪುರ-01, ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 15 ಹೊಸ #Covid19 ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 489ಕ್ಕೆ ಏರಿದೆ. ಇದುವರೆಗೆ ಒಟ್ಟು 153 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ. #ಮನೆಯಲ್ಲೇಇರಿ pic.twitter.com/rlslBSejI4
— B Sriramulu (@sriramulubjp) April 25, 2020
ಈ ಮೂಲಕ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 489 ಕ್ಕೆ ಏರಿಕೆಯಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಿಂದಾಗಿ ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
