ರಾಜ್ಯದಲ್ಲಿ ಒಬ್ಬನಿಂದ 9 ಮಂದಿಗೆ ಕೊರೊನಾ ; ಸೋಂಕಿತರ ಸಂಖ್ಯೆ 443 ಕ್ಕೆ ಏರಿಕೆ!!!

ಬೆಂಗಳೂರು : 

      ರಾಜ್ಯದಲ್ಲಿ ಇಂದು 16 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 443  ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬೆಂಗಳೂರಿನಲ್ಲಿ 9 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಬಿಹಾರಿ ಮೂಲದ ಕಾರ್ಮಿಕನಿಂದ ಬೆಂಗಳೂರಿನ 9 ಮಂದಿಗೆ ಕೊರೊನಾ ಸೋಂಕು ಹರಡಿದೆ. ಅಲ್ಲದೇ ವಿಜಯಪುರ 2, ಮಂಡ್ಯದಲ್ಲಿ 2, ಧಾರವಾಡದಲ್ಲಿ 2, ದಕ್ಷಿಣ ಕನ್ನಡದಲ್ಲಿ ಒಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ.

      ಈ ಮೂಲಕ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 443 ಕ್ಕೆ ಏರಿಕೆಯಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಿಂದಾಗಿ ತಿಳಿದು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap