ಕಲಬುರಗಿ:
ಕ್ವಾರಂಟೈನ್ ಕೇಂದ್ರದಲ್ಲಿ ತಂಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶಹಾಬಾದ್ ಪಟ್ಟಣದಲ್ಲಿ ನಡೆದಿದೆ.
ಈಕೆ ಮಹಾರಾಷ್ಟ್ರದ ಕೊಲ್ಹಾಪುರ ಬಳಿಯ ಸೋಮನಳ್ಳಿಯಲ್ಲಿ ವಾಸವಾಗಿದ್ದಳು. ಮೇ 17ರಂದು ಕಾರ್ಮಿಕರೊಂದಿಗೆ ಕಲಬುರಗಿಗೆ ವಾಪಸಾಗಿದ್ದಾಳೆ. ಈಕೆಯ ಜತೆಗೆ ತಾಯಿ ಹಾಗೂ ಸಹೋದರನನ್ನು ಇಂದಿರಾನಗರ ಮಡ್ಡಿ-1ರ ಕೇಂದ್ರದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
ಬಾಲಕಿಗೆ ಮಂಗಳವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕ್ವಾರಂಟೈನ್ ಕೇಂದ್ರದಲ್ಲಿದ್ದ ಇತರೆ ಮಹಿಳೆಯರೇ ಆಕೆಗೆ ಹೆರಿಗೆ ಮಾಡಿಸಲು ಸಹಕರಿಸಿದ್ದಾರೆ. ಬಾಲಕಿ ಅವಿವಾಹಿತೆ ಆಗಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಇಬ್ಬರನ್ನೂ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ