ಮೈಸೂರಿನಲ್ಲಿ 10 ಸೇರಿ ರಾಜ್ಯದಲ್ಲಿಂದು 17 ಹೊಸ ಕೊರೊನಾ ಪ್ರಕರಣಗಳ ಪತ್ತೆ!!

ಬೆಂಗಳೂರು :

      ರಾಜ್ಯದಲ್ಲಿ ಕೊರೊನಾ ವೈರಸ್ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದು ಒಂದೇ ದಿನ 17 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 277 ಕ್ಕೆ ಏರಿಕೆಯಾಗಿದೆ.

      ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯದಲ್ಲಿನ ಕೊರೊನಾ ಸೋಂಕಿತ ಪ್ರಕರಣಗಳ ಕುರಿತಂತೆ ಹೆಲ್ತ್ ಬುಲೆಟಿನ್ ಅನ್ನು ಬಿಡುಗಡೆ ಮಾಡಿದೆ. ಈ ಬುಲೆಟಿನ್ ನಲ್ಲಿ ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 17 ಜನರಿಗೆ ಕೊರೊನಾ ವೈರಸ್ ಸೋಂಕಿರುವುದಾಗಿ ತಿಳಿಸಿದೆ.

      ಈ ಕುರಿತಂತೆ ಟ್ವೀಟ್ ಮಾಡಿರುವ ಶ್ರೀರಾಮುಲು, ‘ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 17 ಹೊಸ #Covid19 ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 277ಕ್ಕೆ ಏರಿದೆ. 75 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ ಕಷ್ಟದ ಸಮಯದಲ್ಲಿ ನಾಗರೀಕರು ಮನೆಯಲ್ಲಿಯೇ ಸುರಕ್ಷಿತವಾಗಿ ಇರಬೇಕೆಂದು ಕಳಕಳಿಯ ಮನವಿ ಮಾಡುತ್ತೇನೆ.’ ಎಂದು ತಿಳಿಸಿದ್ದಾರೆ.

      ಮೈಸೂರು ಜಿಲ್ಲೆಯ ನಂಜನಗೂಡಿನ ಫಾರ್ಮ ಕಂಪನಿಯ 10 ಜನರಿಗೆ ಇಂದು ಒಂದೇ ದಿನ 10 ಮಂದಿಗೆ ಕೊರನಾ ವೈರಸ್ ದೃಢಪಟ್ಟಿದೆ. ಬಾಗಲಕೋಟೆಯಲ್ಲಿ 2, ವಿಜಯಪುರದಲ್ಲಿ 2 ಕಲಬುರಗಿ ಜಿಲ್ಲೆಗಳಲ್ಲಿ 1 ಕೊರೊನಾ ವೈರಸ್ ಪಾಸಿಟಿವ್ ಪತ್ತೆಯಾಗಿದೆ.

      ಸದ್ಯ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 277ಕ್ಕೇರಿದೆ. ಅದರಲ್ಲಿ 11 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ