ಕೋಲಾರ :
ರಾಜ್ಯಾದ್ಯಂತ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಫಲಿತಾಂಶ ಇಂದು ಹೊರ ಬೀಳುತ್ತಿದ್ದು, ಕೋಲಾರದ 19 ವರ್ಷದ ಸುಮಿತ್ರ ಪುರಸಭೆಯಲ್ಲಿ ಗೆಲುವು ಸಾಧಿಸುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.
ರಾಜ್ಯದಲ್ಲಿ 717 ಪುರಸಭೆ, 271 ನಗರಸಭೆ ಹಾಗೂ ವಿವಿಧ ಪಾಲಿಕೆಗಳ 1224 ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿತ್ತು. ಈ ಚುನಾವಣೆಗಳ ಫಲಿತಾಂಶ ಇದೀಗ ಹೊರಬೀಳುತ್ತಿದ್ದು, ಕೋಲಾರದ ಯುವತಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾಳೆ.
ಕೋಲಾರದ ಅಂತಿಮ ವರ್ಷದ ಬಿಎ ವಿದ್ಯಾರ್ಥಿನಿಯಾಗಿರುವ ಸುಮಿತ್ರ ಮಾಲೂರು ಪಟ್ಟಣದ ವಾರ್ಡ್ ನಂ.27ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಇಂದಿನ ಫಲಿತಾಂಶದಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ 373 ಮತಗಳನ್ನು ಪಡೆದು ಗೆಲುವು ಸಾಧಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ