ಮಂಡ್ಯ:
ಅಕ್ರಮವಾಗಿ ಸಾಗಿಸುತ್ತಿದ್ದ 2,60,500 ರೂಪಾಯಿ ಹಣವನ್ನು ಚುನಾವಣಾ ಅಧಿಕಾರಿಗಳು ಮಂಡ್ಯ ಚೆಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಇಂದು ಬೆಳಿಗ್ಗೆ ನಾಗಮಂಗಲ ತಾಲ್ಲೂಕಿನ ಕದಬಹಳ್ಳಿ ಚೆಕ್ ಪೋಸ್ಟ್ ನಲ್ಲಿ ಉಡುಪಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರನ್ನು ತಪಾಸಣೆ ನಡೆಸಿದಾಗ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2,60,500 ಲಕ್ಷ ರೂ. ಹಣ ವಶ ಪಡಿಸಿಕೊಳ್ಳಲಾಗಿದೆ.
ನಾಳೆ (ಗುರುವಾರ) ಮತದಾನ ಇರುವುದರಿಂದ ಇಂದು ಹಣದ ಹರಿವು ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಗುತ್ತಿಗೆದಾರರು, ರಾಜಕೀಯ ಪಕ್ಷಗಳ ಮುಖಂಡರು, ಪ್ರಮುಖ ಕಾರ್ಯಕರ್ತರ ಮೇಲೆ ಚುನಾವಣಾ ಅಧಿಕಾರಿಗಳು ಮಂಡ್ಯ ಜಿಲ್ಲೆಯಲ್ಲಿ ಹದ್ದಿನ ಕಣ್ಣನ್ನು ಇಟ್ಟಿದ್ದಾರೆ.
ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಹಲವಾರು ಬಾರಿ ಮುಖಂಡರ ಮನೆ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು, ನಾಳೆ ಮತದಾನದ ದಿನವಾಗಿರುವುದರಿಂದ ಹಣದ ಹೊಳೆ ಹರಿಯಲಿರುವ ಹಿನ್ನೆಲೆಯಲ್ಲಿ ಹೆಚ್ಚಿನ ನಿಗಾ ವಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ