ನೆಲಮಂಗಲ :
ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಸಮೀಪ ನಡೆದಿದೆ.
ಕಾವೇರಮ್ಮ, ರಶ್ಮಿ, ಶಿವಕುಮಾರ್ ಮತ್ತು ಕಿರಣ್ ಮೃತ ದುರ್ದೈವಿಗಳು. ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸ್ವಿಫ್ಟ್ ಕಾರು ಹಾಸನದಿಂದ ಬೆಂಗಳೂರಿಗೆ ಬರುತ್ತಿತ್ತು. ಮತ್ತೊಂದು ಕಾರು ಬೆಂಗಳೂರಿನಿಂದ ಹಾಸನಕ್ಕೆ ಹೋಗುತ್ತಿತ್ತು. ಈ ವೇಳೆ ಸ್ವಿಫ್ಟ್ ಡಿಸೈರ್ ಕಾರು ಡಿವೈಡರ್ ಹಾರಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರ ಮಾಹಿತಿ ತಿಳಿದುಬರಬೇಕಿದೆ.
ಸ್ಥಳಕ್ಕೆ ನೆಲಮಂಗಲ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
