ಕೊಪ್ಪಳ:
ಒಳ ಹರಿವು ಹೆಚ್ಚಾದ ಹಿನ್ನೆಲೆ ತುಂಗಾಭದ್ರಾ ಜಲಾಶಯಕ್ಕೆ ಬರುತ್ತಿರುವ ಹೆಚ್ಚುವರಿ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.
ತುಂಗಾಭದ್ರಾ ಜಲಾಶಯದ ಮೇಲ್ಭಾಗದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಇದರಿಂದಾಗಿ ಸೇತುವೆ ಮುಳುಗಡೆಯಾಗಿರುವ ಕಾರಣ ಕಲ್ಯಾಣ ಕರ್ನಾಟಕದ ಬೀದರ್, ಕಲಬುರ್ಗಿ, ರಾಯಚೂರು, ತೆಲಂಗಾಣ ರಾಜಧಾನಿ ಹೈದರಾಬಾದ್, ಮಂತ್ರಾಲಯ ಸೇರಿದಂತೆ ಪ್ರಮುಖ ನಗರಗಳಿಗೆ ಸಂಪರ್ಕ ಕಡಿತಗೊಂಡು ಜನಜೀವನ ಅಸ್ತವ್ಯಸ್ತತವಾಗಿದೆ.
ಜಲಾಶಯಕ್ಕೆ ಬರುತ್ತಿರುವ ಹೆಚ್ಚುವರಿ ನೀರನ್ನು ನಿನ್ನೆಯಿಂದ ನದಿಗೆ ಹರಿಬಿಡಲಾಗುತ್ತಿದ್ದು, ಇಂದು ತುಂಗಾಭದ್ರಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನದಿ ಪಾತ್ರದ ಜನರಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ