ಪುತ್ತೂರು:
ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರನ್ನು ಕೊಲೆಗೈದಿರುವ ದುರ್ಘಟನೆ ಕುರಿಯ ಗ್ರಾಮದ ಅಜಲಾಡಿ ಹೊಸಮಾರಿನಲ್ಲಿ ನಡೆದಿದೆ.
ಹೊಸ್ಮಾರು ನಿವಾಸಿ ಕೊಗ್ಗು ಸಾಹೇಬ್ (62) ಹಾಗು ಅವರ ಮೊಮ್ಮಗಳು ಸಮೀಹಾ (16) ಮೃತ ದುರ್ದೈವಿಗಳು. ಕೊಗ್ಗು ಸಾಹೇಬ್ ಅವರ ಪತ್ನಿ ಖತೀಜಮ್ಮ (55) ಗಂಭೀರ ಗಾಯಗಳೊಂದಿಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋಮವಾರ ರಾತ್ರಿ ವೇಳೆ ಮನೆಯಲ್ಲಿದ್ದ ಮೂವರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಅಜ್ಜ, ಅಜ್ಜಿ ಮತ್ತು ಮೊಮ್ಮಗಳು ಮೂವರೇ ವಾಸವಾಗಿದ್ದು, ಗಂಡುಮಕ್ಕಳು ಹೊರದೇಶದಲ್ಲಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ