ಎನ್ ಕೌಂಟರ್ : ಇಬ್ಬರು ಉಗ್ರರ ಹತ್ಯೆ!!!

ಶೋಪಿಯಾನ್:

      ಕಾಶ್ಮೀರದ ಶೋಫಿಯಾನ್‌ ಜಿಲ್ಲೆಯ ಗಹಾದ್‌ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿ ಇಬ್ಬರು ಭಯೋತ್ಪಾದಕರನ್ನು ಹೊಡೆಸುರುಳಿಸಿದ್ದಾರೆ.

      ಶನಿವಾರ ಬೆಳಗ್ಗೆ ಭಯೋತ್ಪಾದಕರು ಹಾಗೂ ಭದ್ರತಾ ಸಿಬ್ಬಂದಿಗಳು ನಡುವೆ ಗುಂಡಿನ ಚಕಮಕಿ ನಡೆಯಿತು. ಶೋಪಿಯಾನ್‌ನ ಗಹಾಂಡ್ ಪ್ರದೇಶದಲ್ಲಿ ಭಯೋತ್ಪಾದಕರಿರುವ ಸುಳಿವು ಪಡೆದು ಉಗ್ರರು ಇರುವ ಖಚಿತ ಮಾಹಿತಿ ಪಡೆದು ಎನ್‌ಕೌಂಟರ್‌ ಮಾಡಲಾಗಿದೆ.  

      ಭಯೋತ್ಪಾದಕರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ, ಅದಕ್ಕೆ ಪ್ರತಿಯಾಗಿ ಭದ್ರತಾ ಪಡೆ ಕೂಡ ಗುಂಡಿನ ದಾಳಿ ನಡೆದಿದೆ ಈ ದಾಳಿಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ.

      ಹತ್ಯೆಯಾಗಿರುವ ಉಗ್ರರ ಬಗ್ಗೆ ವಿಚಾರಣೆ ನಡೆಸಲಾಗುತ್ತಿದ್ದು ಅವರು ಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನು ತಿಳಿದು ಬಂದಿಲ್ಲ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap