ಚಿಕ್ಕಮಗಳೂರು:
ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ 2 ವರ್ಷದ ಮಗು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪ ನಡೆದಿದೆ.
ಬೆಳಗಿನ ಜಾವ 3 ಗಂಟೆ ಸುಮಾರಿಗೆ ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಸರಕಾರಿ ಬಸ್ಸೊಂದು ಚಾಲಕನ ನಿರ್ಲಕ್ಷದಿಂದ ಉರುಳಿಬಿದ್ದಿದೆ. ಬಸ್ ಪಲ್ಟಿಯಾದಾಗ ಕಿಟಕಿಯಿಂದ ಮಗು ಹೊರ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದೆ. ಹಲವರು ಗಾಯಗೊಂಡಿದ್ದಾರೆ.
ಬಸ್ ಚಾಲಕ ನಿದ್ದೆಗೆ ಜಾರಿದ ಹಿನ್ನೆಲೆಯಲ್ಲಿ ಬಸ್ ನಿರ್ವಾಹಕ ಬಸ್ ಚಲಾಯಿಸುತ್ತಿದ್ದ ಎಂದು ಹೇಳಲಾಗಿದೆ. ಈ ವೇಳೆ ನಿರ್ವಾಹಕನ ನಿಯಂತ್ರಣ ತಪ್ಪಿದ ಬಸ್ ಉರುಳಿಬಿದ್ದಿದೆ. ಗಾಯಾಳುಗಳನ್ನು ಅಜ್ಜಂಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
