ಬೆಳಗಾವಿ :
ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ವಿಷ ಆಹಾರ ಸೇವಿಸಿ 20 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಾಲಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ವಿಷ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ರಾಮದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಮಕ್ಕಳು ಅಪಾಯದಿಂದ ಪಾರಾಗಿದ್ದು, ಘಟನೆಗೆ ಕಾರಣ ಏನು ಎಂಬುದು ಇನ್ನು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ವಿಷ ಆಹಾರದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
