ಬೆಂಗಳೂರು:
ಪುಲ್ವಾಮದಲ್ಲಿ ನಡೆದ ಉಗ್ರರ ಆತ್ಮಾಹುತಿ ಬಾಂಬ್ ದಾಳಿಗೆ ಹುತಾತ್ಮರಾದ ರಾಜ್ಯದ ಯೋಧ ಗುರು ಕುಟುಂಬಕ್ಕೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಮಂಡ್ಯದ ವೀರ ಯೋಧ ಗುರು ಪಾರ್ಥಿವ ಶರೀರ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ, ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಹುತಾತ್ಮ ಯೋಧನ ಅಂತಿಮ ದರ್ಶನ ಪಡೆದು ಪುಷ್ಪ ನಮನ ಸಲ್ಲಿಸಿ, ಗುರು ಅವರ ಪತ್ನಿ ಕಲಾವತಿಗೆ ಸರ್ಕಾರಿ ನೌಕರಿ ಹಾಗೂ ಯೋಧರ ಕುಟುಂಬಕ್ಕೆ 25ಲಕ್ಷ ರೂ. ಪರಿಹಾರ ನೀಡುವುದಾಗಿ ಭರವಸೆ ತಿಳಿಸಿದರು.
ಯೋಧ ಗುರುವಿನ ಪಾರ್ಥಿವ ಶರೀರ ಬೆಂಗಳೂರಿನಿಂದ ಮಂಡ್ಯದ ಗುಡಿಗೇರೆಗೆ ಜೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಸಾಗುತ್ತಿದ್ದು,ಗುರು ಅವರ ಪಾರ್ಥಿವ ಶರೀರ ಹೋಗುತ್ತಿರುವ ದಾರಿಯುದ್ದಕ್ಕೂ ಸಾರ್ವಜನಿಕರು ನಿಂತು ಗೌರವ ಸಮರ್ಪಣೆ ಮಾಡುತ್ತಿದ್ದಾರೆ. ಕೆಲವರು ಸೇನಾ ವಾಹನದ ಮೇಲೆ ಹೂವು ಚೆಲ್ಲುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ