ಚಿತ್ರದುರ್ಗ:
ಲಾರಿ ಹರಿದು ಕುರಿಗಾಹಿ ಯುವಕ ಸೇರಿದಂತೆ 25 ಕ್ಕೂ ಹೆಚ್ಚು ಕುರಿಗಳು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲ್ಲೂಕಿನ ಹುಳಿಯಾರು ರಸ್ತೆಯ ಪಿಲಾಜನಹಳ್ಳಿ ಗೇಟ್ ಬಳಿ ನಡೆದಿದೆ.
ಕುರಿಗಾಹಿ ರಾಜು (23) ಅಪಘಾತದಲ್ಲಿ ಮೃತಪಟ್ಟ ಯುವಕ. ಲಾರಿ ಹರಿದ ಪರಿಣಾಮ ಕುರಿಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಹುಳಿಯಾರಿನಿಂದ ಹಿರಿಯೂರು ತಾಲ್ಲೂಕಿನ ಕೂನಿಕೆರೆಗೆ ಬರುವಾಗ ಈ ದುರ್ಘಟನೆ ಸಂಭವಿಸಿದೆ.
ಕುರಿಗಳು ಚಳ್ಳಕೆರೆ ತಾಲೂಕಿನ ಪರುಶುರಾಂಪುರ ಗ್ರಾಮದ ತಿಮ್ಮಣ್ಣ ಎನ್ನುವ ವ್ಯಕ್ತಿಗೆ ಸೇರಿದ್ದವು ಎನ್ನಲಾಗಿದೆ. ಘಟನೆ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ