ಲೋಕಸಮರ : ಅಕ್ರಮ ಹಣ ತಡೆಯಲು ‘ಮನಿ ಕಮಾಂಡೋ’ಪಡೆ ಎಂಟ್ರಿ!

ಬೆಂಗಳೂರು :

      ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗುತ್ತಿದ್ದಂತೆ ಚುನಾವಣೆಯಲ್ಲಿ ಅಕ್ರಮ ಹಣ ಸಾಗಾಣಿಕೆ ಹಾಗೂ ಹಣ ಸಂಗ್ರಹದ ಮೇಲೆ ತೀವ್ರ ನಿಗಾ ವಹಿಸಲು ರಾಜ್ಯಕ್ಕೆ 250 ಮಂದಿ ‘ಮನಿ ಕಮಾಂಡೋ’ ಪಡೆ ಎಂಟ್ರಿ ಕೊಟ್ಟಿದೆ.

      ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಲ್ಲಿ ಮನಿ ಕಮಾಂಡೋ ಪಡೆ ಹದ್ದಿನ ಕಣ್ಣು ಇಡಲು ಸಿದ್ಧರಾಗಿದ್ದಾರೆ. 224 ಕ್ಷೇತ್ರಗಳಲ್ಲಿ 250 ಐಟಿ ಅಧಿಕಾರಿಗಳ ತಂಡ ಬಂದಿಳಿದಿದ್ದಾರೆ. ಇವರು ಅಕ್ರಮ ಹಣ ಸಾಗಾಣಿಕೆ, ಅಕ್ರಮ ಹಣ ಸಂಗ್ರಹದ ಮೇಲೆ ತೀವ್ರ ನಿಗಾ ವಹಿಸಲು ಬಿಗ್ ಪ್ಲಾನ್ ಸಿದ್ದಪಡಿಸಿದ್ದಾರೆ ಎನ್ನಲಾಗಿದೆ.

       ರಾಜ್ಯದಲ್ಲಿ ಈಗಾಗಲೇ 28 ಲೋಕಸಭಾ ವ್ಯಾಪ್ತಿಯ 224 ವಿಧಾನಸಭೆ ಕ್ಷೇತ್ರಗಳಲ್ಲಿ ಒಬ್ಬೊಬ್ಬ ಅಧಿಕಾರಿ ನೇಮಕವಾಗಿದ್ದಾರೆ. ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಹಾಸನ, ಮಂಡ್ಯ, ಕಲಬುರ್ಗಿ ಬೆಂಗಳೂರು ಉತ್ತರ ಕ್ಷೇತ್ರಗಳಲ್ಲಿ ಕಮಾಂಡೋಗಳು ಕಾರ್ಯನಿರ್ವಹಿಸಲಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap